ಧಾರವಾಡ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
Demand to declare Dharwad district as a drought-affected area
ಧಾರವಾಡ / ಹುಬ್ಬಳ್ಳಿ 20: ಧಾರವಾಡ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರಿಗೆ ತುರ್ತು ಬೆಳೆ ಹಾನಿ ಪರಿಹಾರ ಮತ್ತು ಸಾಮಾಜಿಕ ಭದ್ರತೆ ಪಿಂಚಣಿಯನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ವತಿಯಿಂದ ಪ್ರತಿಭಟನೆ ಮಾಡಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.* ಧಾರವಾಡ ಜಿಲ್ಲೆಯಲ್ಲಿ ಈ ವರ್ಷ ವಾಡಿಕೆಗಿಂತ ತುಂಬಾ ಕಡಿಮೆ ಮಳೆ ಕೊರತೆಯಾಗಿದ್ದು, ಜಿಲ್ಲೆಯಾದ್ಯಂತ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದೆ.
ಜಿಲ್ಲೆಯ ಪ್ರಸ್ತುತ ಸ್ಥಿತಿ:ಕುಡಿಯುವ ನೀರಿನ ಸಮಸ್ಯೆ ಬಹುತೇಕ ಕೆರೆ, ಕೊಳಗಳು ಬತ್ತಿವೆ. ಬೋರ್‌ವೆಲ್‌ಗಳು ವಿಫಲವಾಗಿವೆ. ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ರೈತರು ಅಲ್ಪಸ್ವಲ್ಪ ಮಳೆ ಆಗಿರೋದ್ರಿಂದ ಈಗಾಗಲೇ ಬಿತ್ತನೆ ಮಾಡಿದ್ದಾರೆ ಈಗಾಗಲೇ ಬಿತ್ತನೆ ಮಾಡಿದ ಬೆಳೆಗಳು ಸಂಪೂರ್ಣವಾಗಿ ಮಳೆಯ ಕೊರತೆಯಿಂದ ಹಾಗೂ ಅತಿ ಹೆಚ್ಚು ಉಷ್ಣಾಂಶದಿಠ ನಶಿಸುತ್ತಿವೆ, ಇದರಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಕೆಲಸವಿಲ್ಲದೆ ರೈತರು ಮತ್ತು ಕೃಷಿ ಕಾರ್ಮಿಕರು ಜೀವನೋಪಾಯಕ್ಕಾಗಿ ಇತರ ಜಿಲ್ಲೆಗಳು ಮತ್ತು ರಾಜ್ಯಗಳಿಗೆ ಗುಳೆ ಹೋಗುತ್ತಿದ್ದಾರೆ, ಈಗಾಗಲೇ ರೈತರು ಕೃಷಿಗೆ ಮಾಡಿದ ಸಾಲದ ಹೊರೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಮಾನ್ಯ ಮುಖ್ಯಮಂತ್ರಿಗಳೇ, ಈಗಾಗಲೇ ರೈತರು ಸಂಕಷ್ಟದಲ್ಲಿದ್ದಾರೆ. ತಾವು ಕೂಡಲೇ ಸ್ಥಳಕ್ಕೆ ಉನ್ನತ ಮಟ್ಟದ ಅಧಿಕಾರಿಗಳ ತಂಡ ಕಳುಹಿಸಿ ಪರೀಶೀಲನೆ ನಡೆಸಿ ಸಮಗ್ರ ವರದಿ ಸಂಗ್ರಹಿಸಿ ಯೋಗ್ಯ ಪರಿಹಾರ ನೀಡಬೆಕೆಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಮೇಲೆ ನಮ್ಮ ರೈತ ಕೃಷಿ ಕಾರ್ಮಿಕರ ಸಂಘಟನೆ ಎಐಕೆಕೆಎಂಎಸ್ ಧಾರವಾಡ ಜಿಲ್ಲಾ ಸಮಿತಿ ಒತ್ತಾಯ ಪೂರ್ವಕವಾಗಿ ಮನವಿ ಮಾಡುತ್ತದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 