ಹೂವಿನಹಡಗಲಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ

ಹೂವಿನಹಡಗಲಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ  Demand to declare Hoovina Hadagali taluk a drought-hit area

ಹೂವಿನಹಡಗಲಿ 28: ತಾಲೂಕಿನಾದ್ಯಂತ ಹಸಿರು ಕಂಡರೂ ಒಳಹೊರಗೆ ಬರದ ಛಾಯೆ ಆವರಿಸಿದೆ. ಸರ್ಕಾರ ಕೂಡಲೇ ಹೂವಿನಹಡಗಲಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎ. ಗಾಳೇಪ್ಪ ನೇತೃತ್ವದಲ್ಲಿ ಮಹಿಳಾ ಸಂಘದ ಸದಸ್ಯರು ಆಗ್ರಹಿಸಿದರು.  

ಮಳೆ ಕೊರತೆಯಿಂದ ಒಂದೆಡೆ ಬೆಳೆಗಳು ಸಂಕಷ್ಟಕ್ಕೆ ಸಿಲುಕಿದ್ದರೆ, ಮತ್ತೊಂದೆಡೆ ವಿವಿಧ ರೋಗಗಳು ಬೆಳೆಗಳನ್ನು ಬಾಧಿಸುತ್ತಿವೆ. ಇದರಿಂದ ರೈತರಿಗೆ ಸಮರ​‍್ಕ ಇಳುವರಿ ದೊರೆಯುತ್ತಿಲ್ಲ. ಬೆಳೆ ಬಂದರೂ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗದೆ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಅವರು ದೂರಿದರು.  

ಬೆಳೆ ವೈವಿಧ್ಯತೆಗಾಗಿ ಈ ಬಾರಿ ಸೂರ್ಯಕಾಂತಿ ಸೇರಿದಂತೆ ಪರ್ಯಾಯ ಬೆಳೆಗಳನ್ನು ಬೆಳೆಯಲು ಮುಂದಾದ ರೈತರಿಗೆ ಸಹ ರೋಗಬಾಧೆ ತಲೆನೋವಾಗಿದ್ದು, ರೈತರ ಆತಂಕ ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಿದರು.  

ತಾಲೂಕಿನಲ್ಲಿ ಸಮರ​‍್ಕ ಮಳೆಯಾಗದ ಕಾರಣ ರೈತರು ಬಿತ್ತನೆಗೆ ಬಳಸಿದ ಬೀಜ, ಗೊಬ್ಬರ ಹಾಗೂ ಇತರೆ ಕೃಷಿ ವೆಚ್ಚಗಳು ವ್ಯರ್ಥವಾಗಿವೆ. ಇದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ತಕ್ಷಣ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.  

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಿ, ಪ್ರತಿ ಎಕರೆಗೆ ?30 ಸಾವಿರ ಪರಿಹಾರ ನೀಡಬೇಕು ಎಂದು ರೈತ ಸಂಘದ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ರೇಣುಕಾ ಆಗ್ರಹಿಸಿದರು.