ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಲು ಆಗ್ರಹ
Demand to declare Indi taluk drought prone
ಇಂಡಿ 28 : ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಹಸಿರು ಸೇನೆ ರೈತ ಸಂಘದ ವಿಜಯಪುರ ಜಿಲ್ಲಾ ಘಟಕ ಆಗ್ರಹಿಸಿದೆ.
ಸಂಘದ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ರೈತ ಮುಖಂಡರು ಇಂದಿ ತಹಶೀಲ್ದಾರ್ ನಾಗೇಂದ್ರ ಕೊಳಶೆಟ್ಟಿ ಅವರಿಗೆ ಮನವಿ ಸಲ್ಲಿಸಿದರು. ತಾಲೂಕಿನಲ್ಲಿ ಮಳೆ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕುಡಿಯುವ ನೀರಿಗೂ ಕೊರತೆ ಉಂಟಾಗಿದೆ. ಬಹುತೇಕ ಜಮೀನುಗಳಲ್ಲಿ ಬಿತ್ತನೆ ಕಾರ್ಯವೂ ನಡೆದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಇಂದಿ ತಾಲೂಕನ್ನು ಬರಪೀಡಿತವೆಂದು ಘೋಷಿಸದಿದ್ದರೆ ತಾಲೂಕು ಕಚೇರಿಗಳ ಮುಂದೆ ಹಾಗೂ ಬಸವೇಶ್ವರ ವೃತ್ತದ ಬಳಿ ಧರಣಿ ಸತ್ಯಾಗ್ರಹ ನಡೆಸಿ ಉಗ್ರ ಹೋರಾಟ ಕೈಗೊಳ್ಳುವುದಾಗಿ ರೈತ ಮುಖಂಡರು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಎಸ್.ಬಿ. ಕೆಂಬೋಗಿ, ಮಲ್ಲಿಕಾರ್ಜುನ ನಾವದಗಿ, ತಮ್ಮರಾಯ ಆಸಂಗಿ, ಹನುಮಂತ ಸಿಂಗ್ ರಾಜಪೂತ, ಮಲ್ಲಿಕಾರ್ಜುನ ಹೊಟ್ಟಿ, ಬಸುಗೌಡ ಪಾಟೀಲ, ಅದೃಷ್ಟಪ್ಪ ವಾಲಿ, ಭೀಮರಾಯ ಪೂಜಾರಿ, ಪರ್ಪ ಕೆಂಭಾವಿ, ಸಿದ್ದಣ್ಣ ತಳವಾರ ಸೇರಿದಂತೆ ಅನೇಕ ರೈತ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 