ವಿಜಯಪುರವನ್ನು ಬರಪೀಡಿತ ಜಿಲ್ಲೆ ಘೋಷಿಸಲು ಆಗ್ರಹ
Demand to declare Vijayapura a drought-hit district
ಇಂಡಿ, ಸೆ.4: ವಿಜಯಪುರ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರಿಗೆ ಅಗತ್ಯ ಪರಿಹಾರ ಹಾಗೂ ನೆರವು ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಹಸಿರು ಸೇನೆ ರೈತ ಸಂಘಟನೆ ಹಾಗೂ ವಿವಿಧ ರೈತಪರ ಸಂಘಟನೆಗಳ ನೇತೃತ್ವದಲ್ಲಿ ಸೆ.8ರಂದು ಇಂಡಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಜಿಲ್ಲಾ ಅಧ್ಯಕ್ಷ ಎಸ್.ಬಿ. ಕೆಂಬೋಗಿ ತಿಳಿಸಿದರು.
ನಗರದ ಖಾಸಗಿ ಹೋಟೆಲ್ ಆವರಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಮರ್ಕ ಮಳೆಯಾಗದೆ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ವಿಜಯಪುರ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ ಅಗತ್ಯ ನೆರವು ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಕರವೇ ಮುಖಂಡ ಶ್ರೀಶೈಲ ಮುಳಜಿ ಮಾತನಾಡಿ, ಸೆ.8ರಂದು ಬೆಳಗ್ಗೆ ಇಂಡಿ ಪ್ರವಾಸಿ ಮಂದಿರದಿಂದ ಮೆರವಣಿಗೆ ಆರಂಭಿಸಿ ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ತಹಶೀಲ್ದಾರ್ ಕಚೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.
ಭೀಮರಾಯ ಪೂಜಾರಿ ಮಾತನಾಡಿ, ಬೆಳೆ ನಷ್ಟಕ್ಕೆ ತಕ್ಕಂತೆ ಪರಿಹಾರ ನೀಡಬೇಕು, ಬೆಳೆ ವಿಮೆ ಹಣವನ್ನು ಶೀಘ್ರ ಬಿಡುಗಡೆ ಮಾಡಬೇಕು ಹಾಗೂ ಕೃಷಿ ಸಾಲ ಮನ್ನಾ ಸೇರಿದಂತೆ ರೈತರಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಅದೃಶ್ಯಪ್ಪ ವಾಲಿ ಹಾಗೂ ತಮರಾಯ ಆಸಂಗಿ ಮಾತನಾಡಿ, ಪ್ರತಿಭಟನೆಯಲ್ಲಿ ರೈತರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರೈತರ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾಳಪ್ಪ ಪೂಜಾರಿ, ಮಲ್ಲಪ್ಪ ಹಿರೇಕುರುಬರ, ಮಲ್ಲು ಬಳಗಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 