ವಿಜಯಪುರ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
Demand to declare Vijayapura district a drought-hit area
ದೇವರಹಿಪ್ಪರಗಿ, ಸೆ. 3: ವಿಜಯಪುರ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಮಿತಿ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ದನಗೌಡ ಜಲಪೂರ ತಿಳಿಸಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆಯೆಂದು ಘೋಷಿಸಬೇಕು ಎಂದು ಆಗ್ರಹಿಸಿದರು.
ಈ ಬೇಡಿಕೆಗೆ ಒತ್ತಾಯಿಸಿ ಸೆ. 5ರಂದು ಬೆಳಿಗ್ಗೆ 10.30ಕ್ಕೆ ದೇವರಹಿಪ್ಪರಗಿ ತಾಲೂಕಿನ ಮೊಹರೆ ಹಣಮಂತರಾಯ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ರೈತ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಹಾಗೂ ಮಠಾಧೀಶರ ಬೆಂಬಲದೊಂದಿಗೆ ಸಹಸ್ರಾರು ಜನರ ಬೃಹತ್ ಹೋರಾಟದ ಮೆರವಣಿಗೆ ನಡೆಸಿ, ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
ಜಿಲ್ಲೆಯ ರೈತರು ತೀವ್ರ ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾಗಿದ್ದು, ಸರ್ಕಾರ ಕೂಡಲೇ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ರೈತರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ನಡೆಯಲಿರುವ ಈ ಹೋರಾಟದಲ್ಲಿ ಜಿಲ್ಲೆಯ ಎಲ್ಲ ರೈತ ಬಾಂಧವರು ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಸಿದ್ದನಗೌಡ ಪಾಟೀಲ (ಜಲಪೂರ) ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಸಂಗಾರೆಡ್ಡಿ ತೆಂಗಿನಮನಿ, ರೈತ ಮುಖಂಡರಾದ ಶಂಕರಗೌಡ ಪಾಟೀಲ, ಸಂಗನಗೌಡ ಬಿರಾದಾರ, ಸಂಪತ ಜಮಾದಾರ, ಸಾಹೇಬಗೌಡ ರೆಡ್ಡಿ, ರಾಮು ದೇಸಾಯಿ, ಶ್ರೀಕಾಂತ ಭಜಂತ್ರಿ, ಮಡಿವಾಳಪ್ಪ ಕುಂಬಾರ, ಮಲ್ಲು ಕಡಕೋಳ, ಶಬೀರ್ ಮುಲ್ಲಾ, ದಿನೇಶಗೌಡ ಪಾಟೀಲ, ರಾವುತ ಅಗಸರ, ನಾಗೇಂದ್ರ ಇಂಡಿ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 