ವಿಜಯಪುರ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಲು ಆಗ್ರಹ
Demand to declare Vijayapura district completely drought-hit
ತಾಳಿಕೋಟಿ, ಸೆ.2: ವಿಜಯಪುರ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಇಲ್ಲವಾದರೆ ಕಲಕೇರಿ ಗ್ರಾಮದಿಂದ ವಿಜಯಪುರ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ರಾಷ್ಟ್ರೀಯ ರೈತ ಸಂಘದ ತಾಳಿಕೋಟಿ ತಾಲೂಕು ಪ್ರಧಾನ ಕಾರ್ಯದರ್ಶಿ ಅಶೋಕ ಭೋವಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಸೋಮವಾರ ಕಲಕೇರಿ ಗ್ರಾಮದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲೂಕುಗಳನ್ನು ಮಾತ್ರ ಬರಪೀಡಿತ ಎಂದು ಘೋಷಿಸಿರುವುದು ಸರಿಯಲ್ಲ. ಜಿಲ್ಲೆಯ ಉಳಿದ ತಾಲೂಕುಗಳನ್ನೂ ಬರಪೀಡಿತ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.
ರಾಷ್ಟ್ರೀಯ ರೈತ ಸಂಘದ ಜಿಲ್ಲಾಧ್ಯಕ್ಷ ಹನುಮಂತ ವಡ್ಡರ ಮಾತನಾಡಿ, ವಿಜಯಪುರ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸುವಂತೆ ಸರ್ಕಾರಕ್ಕೆ ಹಾಗೂ ಸಂಬಂಧಿಸಿದ ಸಚಿವರಿಗೆ ಎಚ್ಚರಿಕೆ ನೀಡಲಾಗಿದೆ. ಒಂದು ವೇಳೆ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸದಿದ್ದರೆ ಸಾವಿರಾರು ರೈತರು ವಿಜಯಪುರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಸಿದರು.
ತಾಲೂಕು ಯುವ ಮೋರ್ಚಾ ಅಧ್ಯಕ್ಷ ಗೌಡಪ್ಪಗೌಡ ಹಳಿಮನಿ ಮಾತನಾಡಿ, ವಿಜಯಪುರ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಲು ಸರ್ಕಾರಕ್ಕೆ ಒಂದು ವಾರದ ಗಡುವು ನೀಡಲಾಗಿದೆ. ಈ ಅವಧಿಯಲ್ಲಿ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಕಲಕೇರಿಯಿಂದ ವಿಜಯಪುರ ಜಿಲ್ಲಾಧಿಕಾರಿ ಕಚೇರಿವರೆಗೆ ರೈತರು ಪಾದಯಾತ್ರೆ ನಡೆಸಿ ಮುತ್ತಿಗೆ ಹಾಕಲಿದ್ದಾರೆ ಎಂದು ತಿಳಿಸಿದರು. ತಾಳಿಕೋಟಿ ತಾಲೂಕು ಅಧ್ಯಕ್ಷ ಅಶೋಕಗೌಡ ಪಾಟೀಲ, ಸುರೇಶ ದೇಸಾಯಿ, ಅರವಿಂದ ರಾಠೋಡ ಸೇರಿದಂತೆ ಹಲವರು ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 