ವಿಜಯಪುರ ಜಿಲ್ಲೆಯನ್ನು ಬರಗಾಲವೆಂದು ಘೋಷಿಸಿ, ರೈತರಿಗೆ ಪರಿಹಾರ ಹಾಗೂ ಸಾಲ ಮನ್ನಾ ಮಾಡಲು ಆಗ್ರಹ

ವಿಜಯಪುರ ಜಿಲ್ಲೆಯನ್ನು ಬರಗಾಲವೆಂದು ಘೋಷಿಸಿ, ರೈತರಿಗೆ ಪರಿಹಾರ ಹಾಗೂ ಸಾಲ ಮನ್ನಾ ಮಾಡಲು ಆಗ್ರಹ Demand to declare Vijayapura district drought-hit and to provide relief and loan waivers to farmers

ಲೋಕದರ್ಶನ ವರದಿ 

ವಿಜಯಪುರ 4: ವಿಜಯಪುರ ಜಿಲ್ಲೆಯನ್ನು ತಕ್ಷಣವೇ ಬರಗಾಲ ಪೀಡಿತ ಎಂದು ಘೋಷಿಸಿ, ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ರೈತರ ಸಾಲವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಅಖಂಡ ಕರ್ನಾಟಕ ರೈತ ಸಂಘ, ರಾಜ್ಯ ಘಟಕ, ಬೆಂಗಳೂರು ವತಿಯಿಂದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಅವರ ನೇತೃತ್ವದಲ್ಲಿ ಮಂಗಳವಾರದಂದು ಅಪರ ಜಿಲ್ಲಾಧಿಕಾರಿ ಡಾ. ಓದ್ರಾಮ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. 

ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಜಿಲ್ಲಾ ಸಂಚಾಲಕ ಪಾಂಡು ಹ್ಯಾಟಿ ಜಂಟಿಯಾಗಿ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಸಮರ​‍್ಕ ಮಳೆಯಾಗದ ಕಾರಣ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆಗಳು ಒಣಗಿ ಅಪಾರ ನಷ್ಟ ಉಂಟಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ತಕ್ಷಣವೇ ವಿಜಯಪುರ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸಿ, ರೈತರಿಗೆ ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕು. ಜೊತೆಗೆ ಕೃಷಿಗೆ ಮಾಡಿದ ಸಾಲವನ್ನು ಸಂಪೂರ್ಣ ಮನ್ನಾ ಮಾಡಿ, ರೈತರ ಬದುಕನ್ನು ಉಳಿಸುವ ನಿಟ್ಟಿನಲ್ಲಿ ತುರ್ತು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. 

ಬಸವರಾಜ ಸಿದ್ಧಾಪೂರ ಮಾತನಾಡಿ, ಆಗಷ್ಟ್‌ ಕೊನೆಯ ವಾರದಲ್ಲಿ ಬರಗಾಲ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ. ಕಣ್ಣಿಗೆ ಕಂಡರು ಬರಗಾಲ ಘೋಷಣೆ ಮಾಡಲು ಹಿಂದೇಟು ಹಾಕುತ್ತಿರುವುದು ಯಾತಕ್ಕಾಗಿ. ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದ್ದು ಇಡೀ ದೇಶಕ್ಕೆ ಗೊತ್ತಿರುವ ಸಂಗತಿಯಾಗಿದೆ. ಬರಗಾಲ ಆವರಿಸಿದ್ದು ಮುಖ್ಯಮಂತ್ರಿಗಳ ಕಣ್ಣಿಗೆ ಕಾಣುತ್ತಿಲ್ಲವೇ ಹೇಗೆ? ಹೀಗಿದ್ದರೂ ಬರಗಾಲ ಘೋಷಣೆ ಮಾಡದೇ ಅನಾವಶ್ಯಕವಾಗಿ ವಿಳಂಬ ಮಾಡುತ್ತಿರುವುದು ರೈತ ವಿರೋಧಿ ನೀತಿಯಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಜಿಲ್ಲಾ ಸಂಚಾಲಕ ಪಾಂಡು ಹ್ಯಾಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಸಿದ್ದಾಪುರ, ತಾಳಿಕೋಟೆ ತಾಲೂಕು ಅಧ್ಯಕ್ಷ ಬಾಲಪ್ಪಗೌಡ ಲಿಂಗದಳ್ಳಿ, ತಾಳಿಕೋಟೆ ತಾಲೂಕು ಉಪಾಧ್ಯಕ್ಷ ರಾಮನಗೌಡ ಹಾದಿಮನಿ, ತಾಲೂಕು ಉಪಾಧ್ಯಕ್ಷ ಹೊನಕೇರ​‍್ಪ ತೆಲಗಿ, ಬಸವನ ಬಾಗೇವಾಡಿ ತಾಲೂಕು ಉಪಾಧ್ಯಕ್ಷ ಗುರಲಿಗಪ್ಪ ಪಡಸಲಗಿ, ದಾವಲಸಾಬ ನದಾಫ್, ಸಂಗನಗೌಡ ಕೋಳೂರ, ಬಸನಗೌಡ ಬಿರಾದಾರ, ಅಶೋಕ್ ಉಪ್ಪಲದಿನ್ನಿ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.