ಯಲಬುರ್ಗಾ ಬರಪೀಡಿತ ತಾಲೂಕು ಘೋಷಣೆಗೆ ಒತ್ತಾಯ
Demand to declare Yelburga a drought-hit taluk
ಯಲಬುರ್ಗಾ 29: ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ತೀವ್ರವಾಗಿ ಕುಂಠಿತಗೊಂಡಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಉನ್ನತ ಶಿಕ್ಷಣ ಸಚಿವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
2026ರ ಜುಲೈಯಿಂದ ಆಗಸ್ಟ್ 12ರವರೆಗೆ ಯಲಬುರ್ಗಾ ತಾಲೂಕಿನಲ್ಲಿ ವಾಡಿಕೆಯ ಪ್ರಮಾಣಕ್ಕಿಂತ ಶೇ.30.5ರಷ್ಟು ಮಳೆ ಕೊರತೆಯಾಗಿದೆ. ಇದರಿಂದ ಕೃಷಿ ಬೆಳೆಗಳ ಮೇಲೆ ನೇರ ಪರಿಣಾಮ ಬೀರಿದ್ದು, ಒಟ್ಟು 70,952 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಆಗಬೇಕಿದ್ದರೂ ಕೇವಲ 55,284 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ.
ಮುಸುಕಿನ ಜೋಳ, ತೊಗರಿ, ಹೆಸರು, ಸೂರ್ಯಕಾಂತಿ, ಸಜ್ಜೆ ಹಾಗೂ ಹತ್ತಿ ಸೇರಿದಂತೆ ಪ್ರಮುಖ ಬೆಳೆಗಳು ಮಳೆ ಕೊರತೆಯಿಂದ ತೀವ್ರ ಹಾನಿಗೊಳಗಾಗಿವೆ. ಬಿತ್ತನೆಯಾದ ಬೆಳೆಗಳೂ ಮಳೆಯಿಲ್ಲದೆ ಒಣಗುವ ಸ್ಥಿತಿಗೆ ತಲುಪಿದ್ದು, ರೈತರ ಆರ್ಥಿಕ ಸಂಕಷ್ಟ ಮತ್ತಷ್ಟು ಗಂಭೀರವಾಗಿದೆ. ಇದರೊಂದಿಗೆ ಕೊಳವೆಬಾವಿಗಳ ನೀರಿನ ಮಟ್ಟ ಕುಸಿದಿದ್ದು, ಅಂತರ್ಜಲ ಮಟ್ಟವೂ ಗಣನೀಯವಾಗಿ ಇಳಿಕೆಯಾಗಿದೆ.
ರಾಜ್ಯದ 101 ತಾಲೂಕುಗಳನ್ನು ಈಗಾಗಲೇ ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕು ಕೂಡ ಪಟ್ಟಿಯಲ್ಲಿದೆ. ಆದರೆ ಯಲಬುರ್ಗಾ ತಾಲೂಕು ಪಟ್ಟಿಯಿಂದ ಹೊರಗುಳಿದಿರುವ ಹಿನ್ನೆಲೆಯಲ್ಲಿ, ಇಲ್ಲಿನ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸಿ ತಕ್ಷಣ ಬರಪೀಡಿತ ತಾಲೂಕೆಂದು ಘೋಷಿಸಬೇಕು ಎಂದು ಸಚಿವ ಬಸವರಾಜ ರಾಯರಡ್ಡಿ ಆಗ್ರಹಿಸಿದ್ದಾರೆ.
ಕೇಂದ್ರ ಸರ್ಕಾರದ ಬರಪೀಡಿತ ಪ್ರದೇಶ ಘೋಷಣೆ ಮಾರ್ಗಸೂಚಿಯನ್ವಯ ಶೇ.85ಕ್ಕಿಂತ ಕಡಿಮೆ ಬಿತ್ತನೆ ಪ್ರದೇಶವಿದ್ದಲ್ಲಿ ಬರ ಪರಿಸ್ಥಿತಿಯನ್ನು ಪರಿಗಣಿಸಬಹುದಾಗಿದೆ. ಯಲಬುರ್ಗಾ ತಾಲೂಕಿನಲ್ಲಿ ನಿಗದಿತ ಗುರಿಗಿಂತ ಬಿತ್ತನೆ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿರುವುದರಿಂದ, ರೈತರ ಹಿತದೃಷ್ಟಿಯಿಂದ ತಕ್ಷಣ ಬರಪೀಡಿತ ತಾಲೂಕೆಂದು ಘೋಷಿಸಿ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 