ರಾಜ್ಯವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ: ಇಂದು ಪೂರ್ವಭಾವಿ ಸಭೆ

ರಾಜ್ಯವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ: ಇಂದು ಪೂರ್ವಭಾವಿ ಸಭೆ  Demand to declare the state drought-hit: Preliminary meeting today


ತಾಳಿಕೋಟೆ 07 : ರಾಜ್ಯವನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿ ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನಾ ರ್ಯಾಲಿ ಹಿನ್ನೆಲೆಯಲ್ಲಿ ಆಗಸ್ಟ್‌ 8ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದ   ವಿಠ್ಠಲ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಸಭೆಯ ನೇತೃತ್ವವನ್ನು ಬಿಜೆಪಿ ರಾಜ್ಯ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್‌. ಪಾಟೀಲ ನಡಹಳ್ಳಿ ವಹಿಸಲಿದ್ದು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪಕ್ಷದ ಪ್ರಕಟಣೆಯಲ್ಲಿ ಕೋರಲಾಗಿದೆ.