ವಸತಿ ನಿಲಯಗಳಲ್ಲಿ ಅವ್ಯವಸ್ಥೆ ಸರಿಪಡಿಸಲು ಆಗ್ರಹ
ಕೊಪ್ಪಳ 05: ಜಿಲ್ಲೆಯ ವಿವಿಧ ವಸತಿ ನಿಲಯ ಮ್ಯಾಟ್ರಿಕ್ ಪೂರ್ವ ಹಾಗೂ ಹಿಂದುಳಿದ ವರ್ಗ ಗಳ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ವಸತಿ ನಿಲಯಗಳಲ್ಲಿ ಅವ್ಯವಸ್ಥೆಗಳು ಎದ್ದು ಕಾಡುತ್ತಿವೆ ಆಹಾರಗಳಲ್ಲಿ ಗುಣಮಟ್ಟದ ಸಾಮಗ್ರಿಗಳಿಲ್ಲ ಕಳಪೆ ಮಟ್ಟದ ಆಹಾರ ಬಳಕೆ ಯಾಗುತ್ತಿದೆ ಇದರಿಂದ ವಿದ್ಯಾರ್ಥಿಗಳಲ್ಲಿ ಪೌಷ್ಟಿಕ ಅಂಶ ಗಳ ಕೊರತೆ ಉಂಟಾಗಬಹುದು ಕೂಡಲೇ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕು ಮತ್ತು ಅವ್ಯವಸ್ಥೆ ಸರಿಪಡಿಸಬೇಕೆಂದು ಬಿ ಎಸ್ ಪಿ ಕೊಪ್ಪಳ ಜಿಲ್ಲಾ ಉಸ್ತುವಾರಿಯಾಗಿರುವ ಮೆಹಬೂಬ್ ಖಾನ್ ಒತ್ತಾಯಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿದ ಆವರು ಈಗಾಗಲೇ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಗೆ ತೆರಳಿ ಅಧಿಕಾರಿಗಳನ್ನು ಭೇಟಿ ಮಾಡಿ ಲಿಖಿತ ದೂರನ್ನು ಸಲ್ಲಿಸಿದ ಬಳಿಕ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ. ಬಿಸಿಎಂ ಹಾಸ್ಟಲ್ ಗಳಲ್ಲಿ ಸಂಬಂಧಿಸಿದ ನಿಲಯ ಪಾಲಕರು ತಮ್ಮ ಜವಾಬ್ದಾರಿ ನಿಭಾಯಿಸುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ಧೋರಣೆ ತಾಳುತ್ತಿದ್ದಾರೆ ಇದರಿಂದ ವಿದ್ಯಾರ್ಥಿಗಳ ಜೀವನದ ಮೇಲೆ ದುಷ್ಟ ಪರಿಣಾಮ ಬೀರುತ್ತದೆ ಸಾಕಷ್ಟು ಬಾರಿ ಇದರ ಬಗ್ಗೆ ದೂರು ಸಲ್ಲಿಸಿದರು. ಮೇಲಾಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ, ಇಂದಿನ ವಿದ್ಯಾರ್ಥಿ ಯುವಕರೇ ಈ ನಾಡಿನ ಭಾವಿ ಪ್ರಜೆಗಳಾಗಿದ್ದು ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಜೊತೆಗೆ ಉತ್ತಮ ಗುಣಮಟ್ಟದ ಆಹಾರ ವಿತರಣೆ ಮಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆದರೆ ಇಲ್ಲಿ ನಿರ್ಲಕ್ಷದಿಂದ ಅವ್ಯವಸ್ಥೆ ಎದ್ದು ಕಾಣುತ್ತಿವೆ ಕೂಡಲೇ ಇಲಾಖೆಯ ಮುಖ್ಯಸ್ಥರು ಎಲ್ಲಾ ಅವ್ಯವಸ್ಥೆ ಸರಿಪಡಿಸಿ ಎಲ್ಲಾ ಹಾಸ್ಟೆಲ ಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ಸಾಮಗ್ರಿಗಳು ವಿತರಣೆಯಾಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಬಿ ಎಸ್ ಪಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಮೆಹಬೂಬ್ ಖಾನ್ ಆಗ್ರಹ ಪಡಿಸಿದ್ದಾರೆ