ತುಂಗಭದ್ರಾ ನೀರಾವರಿ ಕಾರ್ಮಿಕರ ಬೇಡಿಕೆ ಈಡೇರಿಸಲು ಆಗ್ರಹ
Demand to fulfill the demands of Tungabhadra irrigation workers
ಬೆಂಗಳೂರು, ಆ.12: ತುಂಗಭದ್ರಾ ನೀರಾವರಿ ಯೋಜನೆಯಲ್ಲಿ ಕಳೆದ 25ಹಿ30 ವರ್ಷಗಳಿಂದ ಖಾಯಂ ಸ್ವರೂಪದ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಖಾಯಂಗೊಳಿಸಬೇಕು, ನಕಲಿ ಗುತ್ತಿಗೆ ಪದ್ಧತಿ ರದ್ದುಪಡಿಸಿ ನೇರ ವೇತನ ಪಾವತಿ ಜಾರಿಗೊಳಿಸಬೇಕು ಹಾಗೂ ಕಾರ್ಮಿಕರಿಗೆ ವರ್ಷಪೂರ್ತಿ ಉದ್ಯೋಗ ಭದ್ರತೆ ನೀಡಬೇಕು ಎಂದು ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘ (ಎಐಸಿಸಿಟಿಯು) ಆಗ್ರಹಿಸಿದೆ.
ಈ ಕುರಿತು ಸಂಘದ ನಿಯೋಗವು ಜಲಸಂಪನ್ಮೂಲ ಸಚಿವರಿಗೆ ಮನವಿ ಸಲ್ಲಿಸಿದ್ದು, ತುಂಗಭದ್ರಾ ಜಲಾಶಯದ ಕಾಲುವೆಗಳಲ್ಲಿ ಸಿಲ್ಟ್ ತೆಗೆಯುವುದು, ಹೂಳೆತ್ತುವುದು, ಜಂಗಲ್ ತೆರವು, ರಸ್ತೆ ಹಾಗೂ ಇತರ ನಿರ್ವಹಣಾ ಕಾಮಗಾರಿಗಳನ್ನು ಹಲವು ವರ್ಷಗಳಿಂದ ಕಾರ್ಮಿಕರೇ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದೆ.
ಈ ಕಾಮಗಾರಿಗಳನ್ನು ಗುತ್ತಿಗೆದಾರರಿಗೆ ನೀಡುತ್ತಿರುವುದರಿಂದ ಕಾರ್ಮಿಕರಿಗೆ ಕೆಲಸದ ಅಭದ್ರತೆ ಉಂಟಾಗುತ್ತಿದೆ. ಈಗಾಗಲೇ ಇರುವ ಕಾಮಗಾರಿಗಳನ್ನು ಕಾರ್ಮಿಕರಿಂದಲೇ ನಿರಂತರವಾಗಿ ಮಾಡಿಸಿದರೆ ವರ್ಷಪೂರ್ತಿ ಕೆಲಸ ಒದಗಿಸಲು ಸಾಧ್ಯವಿದೆ ಎಂದು ಸಂಘ ತಿಳಿಸಿದೆ.
ಕಾರ್ಮಿಕರಿಗೆ ಬಾಕಿ ವೇತನ, ಭವಿಷ್ಯ ನಿಧಿ, ಇಎಸ್‌ಐ, ಕನಿಷ್ಠ ವೇತನದ ಬಾಕಿ, ತುಟ್ಟಿ ಭತ್ಯೆ, ಸುರಕ್ಷತಾ ಸೌಲಭ್ಯ, ಉದ್ಯೋಗ ಭದ್ರತೆ ಹಾಗೂ 371(ಜೆ) ಆಶಯಕ್ಕೆ ಅನುಗುಣವಾದ ಕಲ್ಯಾಣ ಸೌಲಭ್ಯಗಳನ್ನು ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಕಾರ್ಮಿಕರನ್ನು ನಿರಂತರವಾಗಿ ಕೆಲಸದಲ್ಲಿ ಮುಂದುವರಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಸಂಘ ತಿಳಿಸಿದೆ.
ಆದರೆ ಮುನಿರಾಬಾದ್ ಕೇಂದ್ರ ವಲಯದಲ್ಲಿ ಈ ನಿರ್ದೇಶನಗಳ ಸಮರ್ಕ ಜಾರಿಗೆ ತೊಂದರೆಯಾಗುತ್ತಿದೆ ಎಂದು ಸಚಿವರ ಗಮನಕ್ಕೆ ತರಲಾಗಿದೆ. ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.19ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ತುಂಗಭದ್ರಾ ನೀರಾವರಿ ಕಾರ್ಮಿಕರ ಬೃಹತ್ ಪ್ರತಿಭಟನೆ ನಡೆಯಲಿದ್ದು, ಸಚಿವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಘ ಮನವಿ ಮಾಡಿದೆ.
ಸಚಿವರನ್ನು ಭೇಟಿಯಾದ ನಿಯೋಗದಲ್ಲಿ ಎಐಸಿಸಿಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೈತ್ರೇಯಿ ಕೃಷ್ಣನ್, ವಿನಯ್ ಕೆ.ಎಸ್., ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ಅಧ್ಯಕ್ಷ ಕೆ. ನಾಗಲಿಂಗಸ್ವಾಮಿ ಹಾಗೂ ನಾಗರಾಜ್ ಪೂಜಾರ ಇದ್ದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 