ಡಾ.ಉಮಾಶ್ರೀ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಾಂಗ್ರೆಸ್ ಮುಖಂಡ ಜೊತೆಪ್ಪ ಕಪರಟ್ಟಿ ಆಗ್ರಹ
Demand to give Dr. Umashree a ministerial position: Congress leader Jotappa Kaparatti demands
ಲೋಕದರ್ಶನ ವರದಿ
ಮಹಾಲಿಂಗಪುರ 15 : ಮಾಜಿ ಸಚಿವೆ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯರಾದ: ಉಮಾಶ್ರೀ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನ ನೀಡಬೇಕು ಎಂದು ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಮುಖಂಡರು ಮತ್ತು ಕುರುಬ ಸಮಾಜದ ಮುಖಂಡರಾದ ಜೊತೆಪ್ಪ ಕಪರಟ್ಟಿ ಅವರು ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, "ಡಾ.ಉಮಾಶ್ರೀ " ಅವರು ತೇರದಾಳ ಮತಕ್ಷೇತ್ರದ ಅಭಿವೃದ್ಧಿಯ ಹರಿಕಾರಿಣಿ.ತಮ್ಮ ಶಾಸಕತ್ವದ ಅವಧಿಯಲ್ಲಿ ಸುಮಾರು ಎರಡು ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಅನುದಾನವನ್ನು ತರುವ ಮೂಲಕ ಕ್ಷೇತ್ರದ ಸವಾಂರ್ಗೀಣ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿದ್ದಾರೆ. ಅವರ ಈ ಅಭಿವೃದ್ಧಿಪರ ಕಾಳಜಿಯನ್ನು ಗಮನಿಸಿ, ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರು ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು,"ಎಂದು ಒತ್ತಾಯಿಸಿದ್ದಾರೆ.
*ಅಭಿವೃದ್ಧಿಯ ಹರಿಕಾರಿಣಿ: ತಮ್ಮ ಆಡಳಿತಾವಧಿಯಲ್ಲಿ ಎಲ್ಲಾ ಸಮುದಾಯಗಳಿಗೆ ಸಮಾನವಾದ ಅನುದಾನ ಹಂಚಿಕೆ ಮಾಡುವ ಮೂಲಕ 'ಸರ್ವ ಜನಾಂಗದ ಶಾಂತಿಯ ತೋಟ' ನಿರ್ಮಾಣಕ್ಕೆ ಶ್ರಮಿಸಿದ್ದಾರೆ. ಕಳೆದ ಐದು ವರ್ಷಗಳ ಕಾಲ ಸಚಿವೆಯಾಗಿ ರಾಜ್ಯದ ವಿವಿಧ ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿ, ಆಡಳಿತದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಕ್ಷೇತ್ರದಲ್ಲಿ ಕಣ್ಣಿಗೆ ಕಾಣುವ ಅನೇಕ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನಪ್ರಿಯ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ ಎಂದು "ಜೊತೆಪ್ಪ ಕಪರಟ್ಟಿ"ಅವರು ಶ್ಲಾಘಿಸಿದರು.
ಎರಡು ಬಾರಿ ಶಾಸಕಿಯಾಗಿ, ಸಚಿವೆಯಾಗಿ ಮತ್ತು ಸದ್ಯ ವಿಧಾನ ಪರಿಷತ್ ಸದಸ್ಯೆಯಾಗಿ ಜನಸೇವೆ ಮಾಡುತ್ತಿರುವ ಅನುಭವಿ ರಾಜಕಾರಣಿಯಾದ ಉಮಾಶ್ರೀ ಅವರಿಗೆ ಸಚಿವ ಸ್ಥಾನ ನೀಡುವುದು ಸೂಕ್ತ ಮತ್ತು ಸಮಯೋಚಿತವಾದ ನಿರ್ಧಾರವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 