ಪಂಚಮಸಾಲಿ ಸಮಾಜಕ್ಕೆ ಐದು ಸಚಿವ ಸ್ಥಾನ ನೀಡಲು ಆಗ್ರಹ
Demand to give five ministerial posts to Panchamasali Samaj
ಲೋಕದರ್ಶನ ವರದಿ
ವಿಜಯಪುರ 30: ಪಂಚಮಸಾಲಿ ಸಮಾಜಕ್ಕೆ ಸಚಿವ ಸಂಪುಟದಲ್ಲಿ ಸಮರ್ಕ ಪ್ರಾತಿನಿಧ್ಯ ನೀಡುವಂತೆ ಆಗ್ರಹಿಸಿ, ಕನಿಷ್ಠ ಐದು ಮಂದಿ ಪಂಚಮಸಾಲಿ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸಮಾಜದ ಮುಖಂಡ ಸುರೇಶ್ ಶಂಕರಗೌಡ ಬಿರಾದಾರ ಒತ್ತಾಯಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಪಂಚಮಸಾಲಿ ಸಮಾಜವನ್ನು ಕಡೆಗಣಿಸಿರುವುದು ಕಾಂಗ್ರೆಸ್ನ ದೊಡ್ಡ ಪ್ರಮಾದವಾಗಿದೆ. ಎರಡನೇ ಹಂತದ ವಿಸ್ತರಣೆಯಲ್ಲಿ ಶಿವಾನಂದ ಪಾಟೀಲ, ಅಶೋಕ ಮನಗೂಳಿ, ರಾಜು ಕಾಗೆ, ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ವಿಜಯಾನಂದ ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಬೇಡಿಕೆ ಈಡೇರಿಸದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು. 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ತಕ್ಕ ಉತ್ತರ ನೀಡಲಾಗುವುದು ಎಂದು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಶ್ರೀಶೈಲ ಪಾಟೀಲ, ಡಾ. ಶಿವಾನಂದ ರೇಶ್ಮಿ, ಗಣೇಶ ಮಣೂರ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 