ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡಲು ಆಗ್ರಹ

Demand to give ministerial position to Lakshman Savadi

ಸಿಂದಗಿ 06: ಕಳೆದ ಬಿಜೆಪಿ ಸರಕಾರದಲ್ಲಿ ಕರ್ನಾಟಕ ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರೆ​‍್ಡಗೊಂಡು ಪಕ್ಷವನ್ನು ಸಂಘಟಿಸುವಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಉತ್ತರ ಕರ್ನಾಟಕದಲ್ಲಿ ಪಕ್ಷದ ಗೆಲುವಿಗೆ ಕಾರಣಿಕರ್ತರಾದ ಲಕ್ಷ್ಮಣ ಸವದಿ ಅವರಿಗೆ ಸಚಿವ ಸಂಪುಟದಲ್ಲಿ ಸೇರೆ​‍್ಡ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಗು ಬಿರಾದಾರ ಆಗ್ರಹಿಸಿದ್ದಾರೆ. 

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪಕ್ಷದ ಜಿಲ್ಲಾಧ್ಯಕ್ಷ ಮಲ್ಲು ಲೋಣಿ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಸಾಮಾನ್ಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿ ಪಕ್ಷದ ಸಂಘಟನೆಗೆ ಹೆಚ್ಚಿನ ಆಸಕ್ತಿ ವಹಿಸಿದ್ದಾರೆ ಅವರಿಗೆ ವಿಧಾನ ಪರಿಷತ್ತ್‌ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡುವಂತೆ ಒತ್ತಾಯಿಸಿದ್ದಾರೆ.