ಶಾಸಕ ಪುಟ್ಟರಂಗ ಶೆಟ್ಟಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ
Demand to give ministerial position to MLA Puttaranga Shetty
ಶಿಗ್ಗಾವಿ 28: ಚಾಮರಾಜ ನಗರ ಶಾಸಕ ಪುಟ್ಟರಂಗ ಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡುವಂತೆ ತಾಲೂಕಾ ಉಪ್ಪಾರ ಸಮಾಜದ ಕಾರ್ಯದರ್ಶಿ ಚಂದ್ರು ಹೆಬ್ಬಾಳ ಒತ್ತಾಯಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು ಉಪ್ಪಾರ ಸಮಾಜದ ಹಿರಿಯ ನಾಯಕರಾಗಿ ಸತತವಾಗಿ ನಾಲ್ಕು ಬಾರಿ ಶಾಸಕರಾಗಿರುವ ಅನುಭವ ಪುಟ್ಟರಂಗ ಶೆಟ್ಟಿ ಅವರಿಗೆ ಇದ್ದು ಹಿಂದೂಳಿದ ಸಮಾಜವನ್ನು ಗುರಿತಿಸಲು ಇದೊಂದು ಅವಕಾಶ ಇದೆ ಆದ್ದರಿಂದ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ರಾಜ್ಯದ ಎಲ್ಲ ಉಪ್ಪಾರ ಸಮಾಜ ಕಾಂಗ್ರೇಸ್ ಪಕ್ಷದ ಹೈಕಮಾಂಡ ಒತ್ತಾಯಿಸಿದ್ದಾರೆ.ರಾಜ್ಯದಲ್ಲಿ ಉಪ್ಪಾರ ಸಮಾಜದ ಏಕೈಕ ಶಾಸಕ ಹಾಗೂ ಹಿಂದೂಳಿದ ಸಮಾಜ ಇರುವುದರಿಂದ ಶಾಸಕರಿಗೆ ಸಚಿವ ಸ್ಥಾನ ನೀಡುವ ಮೂಲಕ ಹಿಂದೂಳಿದ ಸಮಾಜವನ್ನು ಗುರುತಿಸಿ ಸಮಾಜ ಮುಂದೆ ಬರಲು ಸಹಕಾರಿಯಾಗಲಿದೆ ಎಂದರು.ಈ ಸಂದರ್ಭದಲ್ಲಿ ಗಣಪತಿ ಗಣೋಜಿ, ಲಕ್ಷ್ಮಣ ಕಬನೂರ, ನಾಗಪ್ಪ ಲಕ್ಷ್ಮೀಕೊಪ್ಪ, ಸುರೇಶ ಹುಲಗೂರ ಸೇರಿದಂತೆ ಅನೇಕರು ಇದ್ದರು.
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ 