ಜಮೀರ್ ಅಹ್ಮದ್‌ಗೆ ಸಚಿವ ಸ್ಥಾನ ನೀಡಲು ಆಗ್ರಹ
Demand to give ministerial position to Zameer Ahmed
ಲೋಕದರ್ಶನ ವರದಿ
ಸಿಂದಗಿ 18: ಜಮೀರ್ ಅಹ್ಮದ್ ಖಾನ್ ಅವರು ಪಕ್ಷದ ಸಂಘಟನೆ ಬಲಪಡಿಸುವಲ್ಲಿ, ಅಲ್ಪಸಂಖ್ಯಾತರ ಧ್ವನಿಯಾಗಿ ಕಾರ್ಯನಿರ್ವಹಿಸುವಲ್ಲಿ ಹಾಗೂ ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ನೀಡಿರುವ ಕೊಡುಗೆ ಗಮನಾರ್ಹವಾಗಿದೆ. ಅವರ ಅನುಭವ, ನಾಯಕತ್ವ ಹಾಗೂ ಜನಪರ ಕಾರ್ಯಗಳನ್ನು ಪರಿಗಣಿಸಿ ಎರಡನೆಯ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕೆಂದು ಸಿಂದಗಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಲೀಮ್ ಮರ್ತೂರ್ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಅಲ್ಪಸಂಖ್ಯಾತ ಸಮುದಾಯದ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದ್ದು, ಇದರಿಂದ ಪಕ್ಷಕ್ಕೆ ಮತ್ತಷ್ಟು ಬಲ ದೊರೆಯಲಿದೆ. ರಾಜ್ಯ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಸಿಎಂ ಡಿ.ಕೆ.ಶಿವಕುಮಾರ ನೇತೃತ್ವದ ಭವಿಷ್ಯದ ಸಚಿವ ಸಂಪುಟದಲ್ಲಿ ಮಹತ್ವದ ಸಚಿವ ಸ್ಥಾನ ನೀಡಬೇಕೆಂಬುದು ಆಶಯವಾಗಿದೆ ಎಂದಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 