ಇಂಡಿ ಶಾಸಕರಿಗೆ ಸಚಿವ ಸ್ಥಾನ ನೀಡಲು ಆಗ್ರಹ
Demand to give ministerial posts to Indi MLAs
ಇಂಡಿ 05: ಇಂಡಿ ಕ್ಷೇತ್ರದ ಶಾಸಕ ಯಶವಂತ್ರಾಯಗೌಡ ಪಾಟೀಲರಿಗೆ ಸಚಿವ ಸ್ಥಾನ ನೀಡಿ ನಮ್ಮ ಮತಕ್ಷೇತ್ರಕ್ಕೆ ಇಷ್ಟು ವರ್ಷಗಳ ಕಾಲ ಆದ ಅನ್ಯಾಯವನ್ನು ಈಗಲಾದರೂ ಸರಿಪಡಿಸುವ ಕಾರ್ಯ ಕಾಂಗ್ರೇಸ್ ಪಕ್ಷದ ವರಿಷ್ಠರು ಮಾಡಬೇಕು ಎಂದು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಸಿದ್ದಣ್ಣ ಬೂದಿಹಾಳ ಹೇಳಿದರು.
ಅವರು ಬುಧವಾರ ಪಟ್ಟಣದ ನ್ಯಾಯಾಲಯದ ಆವರಣದಲ್ಲಿನ ವಕೀಲರ ಸಂಘದ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಸ್ವಾತಂತ್ರ್ಯ ನಂತರ ಇಲ್ಲಿಯವರೆಗೂ ಇಂಡಿ ಕ್ಷೇತ್ರಕ್ಕೆ ಸಚಿವ ಸ್ಥಾನ ದೊರೆತಿಲ್ಲ. ಹೀಗಾಗಿ ಪಕ್ಷಾತೀತವಾಗಿ ಇಂಡಿ ಶಾಸಕರಿಗೆ ಸಚಿವ ಸ್ಥಾನ ಸಿಗಬೇಕೆಂಬುದು ಕ್ಷೇತ್ರದ ಜನರ ಬಹುದೊಡ್ಡ ಆಶಯವಾಗಿದೆ. ಕಾಂಗ್ರೆಸ್ ಪಕ್ಷದ ವರಿಷ್ಠರು ಯಶವಂತ್ರಾಯಗೌಡರಿಗೆ ಸಚಿವ ಸ್ಥಾನ ನೀಡಿ ಸಚಿವ ಸ್ಥಾನ ವಂಚಿತ ಕ್ಷೇತ್ರ ಎಂಬ ಹಣೆಪಟ್ಟಿ ಅಳಿಸುವ ಕಾರ್ಯ ಮಾಡಬೇಕೆಂದರು.ನ್ಯಾಯವಾದಿ ಎ.ಎಂ. ಬಿರಾದಾರ ಮಾತನಾಡಿ, ಅಭಿವೃದ್ಧಿ ವಂಚಿತ ಪ್ರದೇಶವಾದ ಇಂಡಿಯನ್ನು ಅಭಿವೃದ್ಧಿ ಪಡಿಸುವಲ್ಲಿ ಶಾಸಕ ಯಶವಂತ್ರಾಯಗೌಡ ಪಾಟೀಲರ ಪಾತ್ರ ಬಹುಮುಖ್ಯವಾಗಿದೆ. ಕ್ಷೇತ್ರದಲ್ಲಿ ಹಲವು ಅಭಿವೃಧ್ಧಿ ಕಾರ್ಯ ಮಾಡಿದ್ದಾರೆ. ಮೂರು ಬಾರಿ ಶಾಸಕರಾಗಿ ಉತ್ತಮ ಆಡಳಿತ ನಡೆಸುತ್ತಿರುವ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ನ್ಯಾಯವಾದಿಗಳಾದ ಎನ್.ಕೆ. ನಾಡಪುರೋಹಿತ, ಎಸ್.ಎಲ್. ನಿಂಬರಗಿಮಠ, ಎ.ಜೆ.ಧನಶೆಟ್ಟಿ, ಡಿ.ಜಿ. ಜೋತಗೊಂಡ, ಎಸ್.ಆರ್.ಮುಜಗೊಂಡ, ಬಿ.ಬಿ. ಬಿರಾದಾರ, ಎಸ್.ಆರ್. ಬಿರಾದಾರ, ವೈ.ಎಸ್. ಪೂಜಾರಿ, ಎಂ.ಎಸ.ಭೋಸಗಿ, ಎಸ್.ಕೆ. ರಾಠೋಡ, ಎಂ.ಎಸ್. ಪಾಟೀಲ, ಬಿ.ಬಿ. ಬಿರಾದಾರ, ಜಿ.ಎಸ್. ಪಾಟೀಲ, ಪಿ.ಬಿ. ಪಾಟೀಲ, ಎ.ಎ. ಗಜಾಕೋಶ, ಜೆ.ಬಿ. ಬೇನೂರ ಸೇರಿದಂತೆ ಇನ್ನಿತರರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 