ಜೆಎಲ್ಸಿ ತಿಪ್ಪಣ್ಣಪ್ಪ ಕಮಕನೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ
Demand to grant a ministerial post to JLC Thippannappa Kamakanur
ಲೋಕದರ್ಶನ ವರದಿ
ಕಂಪ್ಲಿ, ಜು.11: ಕಾಂಗ್ರೆಸ್ ಹೈಕಮಾಂಡ್, ವರಿಷ್ಠರು ಹಾಗೂ ನೂತನ ಮುಖ್ಯಮಂತ್ರಿ ಅವರು ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ರಾಮಸಾಗರ ಗಂಗಾಪರಮೇಶ್ವರಿ ಸೇವಾ ಸಮಿತಿ ಟ್ರಸ್ಟ್ ಅಧ್ಯಕ್ಷ ಬಿ. ಮಂಜುನಾಥ್ ಆಗ್ರಹಿಸಿದರು.
ರಾಮಸಾಗರ ಗ್ರಾಮದಲ್ಲಿರುವ ಗಂಗಾಪರಮೇಶ್ವರಿ ದೇವಸ್ಥಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 40 ಲಕ್ಷಕ್ಕೂ ಹೆಚ್ಚು ಗಂಗಾಮತ (ಬೆಸ್ತ) ಸಮುದಾಯದ ಜನಸಂಖ್ಯೆ ಇದ್ದು, ಈ ಸಮುದಾಯವು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದೆ ಎಂದು ಹೇಳಿದರು.
ಸಮುದಾಯದ ಅಭಿವೃದ್ಧಿ ಹಾಗೂ ರಾಜಕೀಯ ಪ್ರತಿನಿಧಿತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಗಂಗಾಮತ ಸಮಾಜದ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಜೆಎಲ್ಸಿ ತಿಪ್ಪಣ್ಣಪ್ಪ ಕಮಕನೂರು ಅವರಿಗೆ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಗಂಗಾಮತ ಸಮಾಜದ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 