ತಿಪ್ಪಣ್ಣಪ್ಪ ಕಮಕನೂರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ
Demand to grant a ministerial post to Thippannappa Kamakanuru
ಕಂಪ್ಲಿ, ಜು.16: ರಾಜ್ಯದಲ್ಲಿ ಗಂಗಾಮತ (ಬೆಸ್ತ) ಸಮುದಾಯಕ್ಕೆ ಸಮರ್ಕ ರಾಜಕೀಯ ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹಮ್ಮುನೂರು-ಸುಗೂರು ಗ್ರಾಮದ ಗಂಗಾಪರಮೇಶ್ವರಿ ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷ ಎಂ. ವೀರೇಶ್ ಆಗ್ರಹಿಸಿದರು. ಹಮ್ಮುನೂರು-ಸುಗೂರು ಗ್ರಾಮದ ಗಂಗಾಪರಮೇಶ್ವರಿ ದೇವಸ್ಥಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 40 ರಿಂದ 50 ಲಕ್ಷಕ್ಕೂ ಹೆಚ್ಚು ಗಂಗಾಮತ (ಬೆಸ್ತ) ಸಮುದಾಯದ ಜನಸಂಖ್ಯೆ ಇದ್ದರೂ, ಸಮುದಾಯವು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಹಿಂದುಳಿದಿದೆ ಎಂದು ಹೇಳಿದರು.
ಸಮುದಾಯದ ಅಭಿವೃದ್ಧಿಗೆ ಹಾಗೂ ಅದರ ಧ್ವನಿಯಾಗಿ ರಾಜ್ಯ ಮಟ್ಟದಲ್ಲಿ ಕಾರ್ಯನಿರ್ವಹಿಸಲು ಸಮರ್ಥ ನಾಯಕತ್ವದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ನಿರಂತರವಾಗಿ ಜನಪರ ಕೆಲಸ ಮಾಡುತ್ತಿರುವ ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರಿಗೆ ಸಚಿವ ಸ್ಥಾನ ನೀಡುವ ಮೂಲಕ ಗಂಗಾಮತ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಗಂಗಾಮತ ಸಮುದಾಯದ ಮುಖಂಡರಾದ ದೊಡ್ಡಬಸಪ್ಪ ಬಾರಿಕೇರಿ, ಮಲ್ಲಿಕಾರ್ಜುನ ತಿಪ್ಪೇಶಿ, ಕೆ. ಶಿವಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 