ಜನಸ್ಪಂದನ ಸಭೆ ನಡೆಸಲು ಒತ್ತಾಯ
Demand to hold a public grievance redressal meeting
ಲೋಕದರ್ಶನ ವರದಿ
ಹೊಸಪೇಟೆ 03: ಪ್ರಜಾ ಜಾಗೃತಿ ವೇದಿಕೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿ, ವಿಜಯನಗರ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಪರಿಹಾರಕ್ಕಾಗಿ ಪ್ರತಿ ತಿಂಗಳು ಜನಸ್ಪಂದನ ಸಭೆ ನಡೆಸುವಂತೆ ಒತ್ತಾಯಿಸಿದರು. ವೇದಿಕೆಯ ಜಿಲ್ಲಾಧ್ಯಕ್ಷ ಯು. ಆಂಜನೇಯಲು ಮಾತನಾಡಿ, ಸರ್ಕಾರದ ಆದೇಶದಂತೆ ಜನಸ್ಪಂದನ ಸಭೆಗಳನ್ನು ನಿಯಮಿತವಾಗಿ ನಡೆಸಿ ಸಾರ್ವಜನಿಕರ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಆಗ್ರಹಿಸಿದರು.
ಪ್ರಧಾನ ಕಾರ್ಯದರ್ಶಿ ವೈ. ಯಮುನೇಶ್ ಮಾತನಾಡಿ, ವಿಜಯನಗರ ಜಿಲ್ಲೆ ರಚನೆಯಾಗಿ ಐದು ವರ್ಷಗಳಾದರೂ ಅಗತ್ಯ ಮೂಲಸೌಕರ್ಯ ಹಾಗೂ ಕಚೇರಿಗಳ ಕೊರತೆ ಮುಂದುವರಿದಿದೆ. ಜಿಲ್ಲಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಅಭಿವೃದ್ಧಿ ಕಾಮಗಾರಿಗಳನ್ನು ಪರೀಶೀಲಿಸಿ ವೇಗಗೊಳಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ವೇದಿಕೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 