ಒಳ ಮೀಸಲಾತಿ ಜಾರಿಗೆ ತರಲು ಒತ್ತಾಯ
Demand to implement internal reservation
ಹೂವಿನಹಡಗಲಿ 18: ನ್ಯಾ.ನಾಗಮೋಹನದಾಸ್ ಆಯೋಗ ವರದಿಯನ್ನು ಅಂಗೀಕರಿಸಿ ಒಳಮೀಸಲಾತಿ ಶೀಘ್ರವಾಗಿ ಜಾರಿಗೊಳಿಸಲು ವಿಧಾನಸಭೆಯಲ್ಲಿ ಬೆಂಬಲ ನೀಡಬೇಕು ಹಾಗೂ ಮುಖ್ಯಮಂತ್ರಿ ಮೇಲೆ ಒತ್ತಡ ತರುವಂತೆ ಒತ್ತಾಯಿಸಿ ಸಮಿತಿಯ ಪದಾಧಿಕಾರಿಗಳು, ಮುಖಂಡರು ಶಾಸಕರ ಜನ ಸಂಪರ್ಕ ಕಚೇರಿ ಯಲ್ಲಿ ಆಪ್ತ ಸಹಾಯಕ ಅರುಣಿ ಸುರೇಶ್ ಸೋಮವಾರ ಮನವಿ ಸಲ್ಲಿಸಿದರು.
ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳಿಗೂ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ಜವಾಬ್ದಾರಿ ಸರ್ಕಾರದ ಮೇಲಿದೆ. ಒಳಮೀಸಲಾತಿಯನ್ನು ರಾಜ್ಯ ಸರ್ಕಾರವೇ ಜಾರಿಗೊಳಿಸಬಹುದು ಎಂದು ಸುಪ್ರಿಂಕೋರ್ಟ್ ತೀರ್ು ನೀಡಿ ವರ್ಷ ಕಳೆದರೂ ಸರ್ಕಾರ ಕಾಲಹರಣ ಮಾಡಿಕೊಂಡಿರುವುದು ಸಮುದಾಯದ ನಿರ್ಲಕ್ಷ್ಯಕ್ಕೆ ಕಾರಣವಾಗಿದೆ ಎಂದರು. ಒಳಮೀಸಲಾತಿ ಜಾರಿ ಆಗುವವರೆಗೆ ಉದ್ಯೋಗ. ಅವಕಾಶಗಳನ್ನು ನಿಲ್ಲಿಸಲಾಗಿದೆ ಕೂಡಲೇ ಸಿಎಂ. ಸಿದ್ದರಾಮಯ್ಯನವರು ಕಾಲಹರಣ ಮಾಡದೇ 19ರಂದು ನಡೆಯುವ. ಸಂಪುಟ ಸಭೆಯಲ್ಲಿ ಜಾರಿಗೊಳಿಸದೇ ಸಭೆಯಲ್ಲಿ ಸಮಿತಿ ರಚಿಸಿದರೆ ಉಗ್ರ ಹೋರಾಟ ಮಾಡುವುದಾಗಿದಾಗಿ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಸಮಿತಿ ಅಧ್ಯಕ್ಷ ಕೆ.ದುರುಗೇಶ, ಎಸ್.ನಿಂಗರಾಜ, ಲಲಿತಮ್ಮ, ಪಿ.ನಿಂಗಪ್ಪ, ಮಂಜಪ್ಪ, ಕಗ್ಗಲಪ್ಪ ಇದ್ದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 