ಮುದ್ದೇಬಿಹಾಳ, ದೇವರಹಿಪ್ಪರಗಿ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಆಗ್ರಹ

ಮುದ್ದೇಬಿಹಾಳ, ದೇವರಹಿಪ್ಪರಗಿ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಆಗ್ರಹ  Demand to include Muddebihal and Devarahipparagi taluks in the drought-hit list


ತಾಳಿಕೋಟೆ ಸೆ.11: ತಾಲೂಕಿಗೆ ಸೇರಿದ ಮುದ್ದೇಬಿಹಾಳ ಹಾಗೂ ದೇವರಹಿಪ್ಪರಗಿ ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದನ್ನು ವಿರೋಧಿಸಿ, ಅವುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಗುರುವಾರ ಅಹೋರಾತ್ರಿ ಧರಣಿ ಆರಂಭಿಸಲಾಯಿತು.  

ಮುದ್ದೇಬಿಹಾಳ ಹಾಗೂ ದೇವರಹಿಪ್ಪರಗಿ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸದಿದ್ದರೆ ತಾಳಿಕೋಟೆ ಪಟ್ಟಣ ಬಂದ್ಗೆ ಕರೆ ನೀಡಲಾಗುವುದು. ಬಳಿಕ ವಿವಿಧ ರೀತಿಯ ಹೋರಾಟ ನಡೆಸಿ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಉಮೇಶ ವಾಲಿಕಾರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.  

ಧರಣಿಯಲ್ಲಿ ಸಂಘದ ಉಪಾಧ್ಯಕ್ಷ ರಾಮನಗೌಡ ಹಾದಿಮನಿ, ಮಲ್ಲನಗೌಡ ಬಿರಾದಾರ, ಭೀಮನಗೌಡ ಬಿರಾದಾರ, ನಾನಾಗೌಡ ಮುದ್ನೂರ, ಮಾಂತಗೌಡ ಮುದ್ನೂರ, ಶರಣಗೌಡ ಅಂಗಡಗೇರಿ, ಮಡಿವಾಳಪ್ಪ ಕಲಬುರ್ಗಿ, ಅಪ್ಪಾಸಾಹೇಬ ಕೋಳೂರ, ಸೋಮನಗೌಡ ಹಾದಿಮನಿ, ಮಲ್ಲನಗೌಡ ಕೊಡಗಾನೂರ, ಸುಭಾಷ ಗುಂದಗಿ, ವೆಂಕನಗೌಡ ಬಿರಾದಾರ, ಶಾಂತಗೌಡ ಬಿರಾದಾರ, ಗುರುಣಗೌಡ ಬಿರಾದಾರ, ಮಲ್ಲಿಕಾರ್ಜುನ ನಾವಿ, ಹುಸೇನಸಾಬ ಇನಾಮದಾರ, ಬಸಣ್ಣಉಪ್ಪಲದಿನ್ನಿ, ಅಪ್ಪಣಗೌಡ ಬಿರಾದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.