ಬರಪೀಡಿತ ತಾಲೂಕುಗಳ ಪಟ್ಟಿಗೆ ತಾಳಿಕೋಟೆ ಸೇರೆ್ಡಗೆ ಆಗ್ರಹ
Demand to include Talikote in the list of drought-hit taluks
ತಾಳಿಕೋಟೆ, ಸೆ.18: ರಾಜ್ಯ ಸರ್ಕಾರ ಪ್ರಕಟಿಸಿರುವ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಸಂಪೂರ್ಣ ನೀರಾವರಿ ವಂಚಿತ ತಾಳಿಕೋಟೆ, ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದನ್ನು ಖಂಡಿಸಿ ಸೋಮವಾರ ತಾಳಿಕೋಟೆ ಬಂದ್ಗೆ ಕರೆ ನೀಡಲಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು.
ಪಟ್ಟಣದ ಗುರುವಾರ ನಡೆದ ಬೃಹತ್ ಪಾದಯಾತ್ರೆ ಹಾಗೂ ಧರಣಿ ಸತ್ಯಾಗ್ರಹದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶುಕ್ರವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಮೂರು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು. ಇಲ್ಲವಾದರೆ ಸೋಮವಾರ ಸುಮಾರು 10 ಸಾವಿರ ರೈತರೊಂದಿಗೆ ತಾಳಿಕೋಟೆ ಪಟ್ಟಣ ಸಂಪೂರ್ಣ ಬಂದ್ ಮಾಡಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ದೇವರಹಿಪ್ಪರಗಿ, ಆಲಮೇಲ, ಸಿಂದಗಿ ಹಾಗೂ ಮುದ್ದೇಬಿಹಾಳ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗಿದೆ. ಆದರೆ ತಾಳಿಕೋಟೆ ತಾಲೂಕಿನಲ್ಲಿ ಕನಿಷ್ಠ ಒಂದು ಎಕರೆ ಜಮೀನಿಗೂ ಸಮರ್ಕ ನೀರಾವರಿ ಸೌಲಭ್ಯವಿಲ್ಲ. ಇಂತಹ ಪರಿಸ್ಥಿತಿಯಲ್ಲೂ ತಾಳಿಕೋಟೆ, ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ನಿರಂತರವಾಗಿ ಕಡೆಗಣಿಸಿರುವುದು ರೈತರಿಗೆ ಮಾಡಿರುವ ಅನ್ಯಾಯ ಎಂದು ನಡಹಳ್ಳಿ ಆರೋಪಿಸಿದರು.
ವಿಶೇಷ ಅಧಿವೇಶನ ಆರಂಭಕ್ಕೂ ಮುನ್ನವೇ ಈ ಮೂರು ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಬೇಕು. ಇಲ್ಲವಾದರೆ ಸೋಮವಾರ 10 ಸಾವಿರ ರೈತರೊಂದಿಗೆ ತಾಳಿಕೋಟೆ ಬಂದ್ ನಡೆಸಲಾಗುವುದು. ಹೋರಾಟದ ಸಂದರ್ಭದಲ್ಲಿ ಯಾವುದೇ ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾದರೆ ಸರ್ಕಾರ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಡಳಿತ ಪಕ್ಷದ ಶಾಸಕರೇ ನೇರ ಹೊಣೆ ಎಂದು ಎಚ್ಚರಿಸಿದರು.
ಅಧಿವೇಶನದಲ್ಲಿ ಹೋರಾಟ
ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಮಾತನಾಡಿ, ಉಳಿದ ಮೂರು ತಾಲೂಕುಗಳನ್ನು ಸೋಮವಾರದೊಳಗೆ ಬರಪೀಡಿತ ಎಂದು ಘೋಷಿಸದಿದ್ದರೆ ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದರು.
ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಮಾತನಾಡಿ, ಜಿಲ್ಲೆಯ ಹತ್ತು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿರುವುದು ಸ್ವಾಗತಾರ್ಹ. ಉಳಿದ ಮೂರು ತಾಲೂಕುಗಳನ್ನೂ ತಕ್ಷಣ ಬರಪೀಡಿತ ಪಟ್ಟಿಗೆ ಸೇರಿಸಿ ರೈತರಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಹಲವು ಮುಖಂಡರು, ನೂರಾರು ಕಾರ್ಯಕರ್ತರು ಹಾಗೂ ರೈತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 