ಮಹಿಳಾ ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿ ಹೆಚ್ಚಿಸಲು ಆಗ್ರಹ
Demand to increase female staff in women's police stations
ಬಳ್ಳಾರಿ 01 : ನಗರದಲ್ಲಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಬಳ್ಳಾರಿ ಜಿಲ್ಲಾ ಘಟಕದ ಹೋರಾಟದ ಫಲವಾಗಿ ಆರಂಭಗೊಂಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗಳ ಕೊರತೆ ಎದುರಾಗಿರುವ ಹಿನ್ನೆಲೆ, ಮಹಿಳೆಯರ ಸಮಸ್ಯೆಗಳ ಪರಿಹಾರಕ್ಕೆ ತೊಂದರೆ ಉಂಟಾಗಿದೆ ಎಂದು ಸಂಘಟನೆ ಆರೋಪಿಸಿದೆ.ಇತ್ತೀಚಿನ ದಿನಗಳಲ್ಲಿ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗಳ ಸಂಖ್ಯೆ ಕಡಿಮೆಯಾಗಿರುವುದರಿಂದ, ಮಹಿಳೆಯರು ತಮ್ಮ ಮೇಲೆ ನಡೆಯುವ ದೌರ್ಜನ್ಯ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಪುರುಷ ಪೊಲೀಸ್ ಅಧಿಕಾರಿಗಳಿಗೆ ವಿವರಿಸಲು ಸಂಕೋಚ ಅನುಭವಿಸುತ್ತಿದ್ದಾರೆ. ಜೊತೆಗೆ, ಸಮಸ್ಯೆಗಳ ಪರಿಹಾರಕ್ಕೆ ಹಣಕಾಸಿನ ವ್ಯವಹಾರಗಳು ನಡೆಯುತ್ತಿವೆ ಎಂಬ ಆರೋಪವೂ ಕೇಳಿಬರುತ್ತಿದೆ.
ಮಹಿಳಾ ಸಮಸ್ಯೆಗಳ ಪರಿಹಾರಕ್ಕಾಗಿ ಸ್ಥಾಪಿತವಾದ ಠಾಣೆ ಹೆಸರಿಗಷ್ಟೇ ಸೀಮಿತವಾಗಿದ್ದು, ಹಣವಿಲ್ಲದೆ ಕೆಲಸಗಳು ಸಾಗುವುದಿಲ್ಲ ಎಂಬಂತ ಪರಿಸ್ಥಿತಿ ನಿರ್ಮಾಣವಾಗಿದೆ. ಠಾಣೆ ಸುತ್ತಮುತ್ತಲೂ ಮಹಿಳೆಯರಿಗಿಂತ ಪುರುಷರ ಸಂಖ್ಯೆ ಹೆಚ್ಚಿರುವುದು ಕೂಡ ಮಹಿಳೆಯರಿಗೆ ಅಸೌಕರ್ಯ ಉಂಟುಮಾಡುತ್ತಿದೆ ಎಂದು ಸಂಘಟನೆ ತಿಳಿಸಿದೆ.ಈ ಎಲ್ಲ ಸಮಸ್ಯೆಗಳ ಕುರಿತು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ರಾಜ್ಯ ಅಧ್ಯಕ್ಷೆ ಜೆ. ಚಂದ್ರಕುಮಾರಿ, ಜಿಲ್ಲಾ ಕಾರ್ಯದರ್ಶಿ ಈ. ವರಲಕ್ಷ್ಮೀ, ಜಿಲ್ಲಾ ಖಜಾಂಚಿ ಟಿ. ಈರಮ್ಮ, ಜಿಲ್ಲಾ ಸಮಿತಿ ಸದಸ್ಯೆ ಓಂಕಾರಮ್ಮ ಹಾಗೂ ತಾಲ್ಲೂಕು ಸಮಿತಿ ಸದಸ್ಯೆ ಜಿ. ಹೇಮಾವತಿ ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 