ರಾಜ್ಯ ಬಜೆಟ್ ನಲ್ಲಿ ಹಾಸ್ಟೆಲ್ ಆಹಾರ ಭತ್ಯೆಯನ್ನು 4.500ರೂ ಏರಿಕೆ ಮಾಡಲು ಆಗ್ರಹಿಸಿ: ವಿವಿಧ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಮನವಿ
Demand to increase hostel food allowance by Rs 4,500 in the state budget: Appeal from various hostel
ಹಾವೇರಿ 01 : ರಾಜ್ಯ ಬಜೆಟ್ ನಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳ ಆಹಾರ ಭತ್ಯೆಯನ್ನು 4.500ರೂ ಏರಿಕೆ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ ನ 30ಅ ಹಣವನ್ನು ಮೀಸಲಿಡಲು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ರಾಜ್ಯಾದ್ಯಂತ ಹಾಸ್ಟೆಲ್ ಎದುರು ಪ್ರತಿಭಟನೆಗೆ ಕರೆ ನೀಡಿದ ಹಿನ್ನೆಲೆಯಲ್ಲಿ ನಗರದ ವಿವಿಧ ಹಾಸ್ಟೆಲ್ ವಿದ್ಯಾರ್ಥಿಗಳಿಂದ ವಸತಿ ನಿಲಯದ ನಿಲಯ ಪಾಲಕರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಎಸ್‌ಎಫ್‌ಐ ಹಾಸ್ಟೆಲ್ ವಿದ್ಯಾರ್ಥಿಗಳ ರಾಜ್ಯ ಸಂಚಾಲಕ ಅರುಣ್ ನಾಗವತ್ ಮಾತನಾಡಿ, ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಮಾರ್ಚ್ 06 ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್ ನಲ್ಲಿ ವಿದ್ಯಾರ್ಥಿಗಳ ಬೇಡಿಕೆಗಳನ್ನು ಈಡೇರಿಸಬೇಕು. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಶಿಕ್ಷಣತಜ್ಞರು ಕೊಠಾರಿ ಆಯೋಗದ ಶಿಫಾರಸಿನಂತೆ ರಾಜ್ಯಸರ್ಕಾರ ಬಜೆಟ್ ನಲ್ಲಿ ಕನಿಷ್ಠ 30ಅ ಹಣ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಬೇಕು ಎಂದು ಹಲವು ವರ್ಷಗಳಿಂದ ಹೋರಾಟ ಮುಂದುವರಿಯುತ್ತಿದ್ದರು ಶಿಕ್ಷಣ ಕ್ಷೇತ್ರಕ್ಕೆ ಪ್ರತಿ ಬಜೆಟ್ ನಲ್ಲಿ ಹಣ ಕಡಿತ ಮಾಡಿ ಸರಾಸರಿ ಕೇವಲ 11ಅ ಹಣ ನೀಡುತ್ತಿರುವುದು ಖಂಡನೀಯ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 