ಸೌಧದ ಮುಂದೆ ಭುವನೇಶ್ವರಿ ದೇವಿಯ 108 ಅಡಿ ಎತ್ತರದ ಪ್ರತಿಮೆ ಸ್ಥಾಪಿಸಿ

ಸೌಧದ ಮುಂದೆ ಭುವನೇಶ್ವರಿ ದೇವಿಯ 108 ಅಡಿ ಎತ್ತರದ ಪ್ರತಿಮೆ ಸ್ಥಾಪಿಸಿ Demand to install 108-foot tall statue of Goddess Bhuvaneshwari

ಬೆಳಗಾವಿ 05: ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂದೆ ಕರ್ನಾಟಕ ಮಾತೆ ಭುವನೇಶ್ವರಿ ದೇವಿ 108 ಅಡಿಯಕ್ಕಿಂತ ಎತ್ತರದ ಕಂಚಿನ ಪ್ರತಿಮೆ ಸ್ಥಾಪಿಸುವಂತೆ ಸರ್ವೋದಯ ಸ್ವಯಂ ಸೇವಾ ಸಂಘ ಹಾಗೂ ಬೆಳಗಾವಿ ಕನ್ನಡಪರ ಸಂಘಟಣೆಗಳ ಒಕ್ಕೂಟ ಒತ್ತಾಯಿಸಿವೆ.  

ದಿ.5ರಂದು ಕನ್ನಡಪರ ಹೋರಾಟಗಾರ ಶ್ರೀನಿವಾಸ ತಾಳೂಕರ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಹೋರಾಟಗಾರರು, ಈ ಕುರಿತು ಮನವಿಯೊಂದನ್ನು ಸಲ್ಲಿಸಿ, ದಿ: 11-12-2023ರಂದು ಈ ಹಿಂದೆ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವ ಸವಿನೆನಪಿಗಾಗಿ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ಸ್ಥಾಪಿಸಲು ಮನವಿ ಅರ​‍್ಿಸಿದ್ದವು, ಈ ಮನವಿಗೆ ಸ್ಪಂದಿಸಿದ ಸರಕಾರ ಬೆಂಗಳೂರು ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ಸ್ಥಾಪನೆ ಮಾಡಿರುವದು ಸ್ವಾಗತಾರ್ಹ ಸಂಗತಿಯಾಗಿದೆ.  

ಈಗಾಗಲೇ ಬೆಳಗಾವಿಯ ಸುವರ್ಣ ಸೌಧದ ಆವರಣದಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ, ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ ಹಾಗೂ ಮಹಾತ್ಮಾ ಗಾಂಧೀಜಿಯವರ ಪ್ರತಿಮೆ ಸ್ಥಾಪಿಸಿರುವದು ಹೆಮ್ಮೆಯ ವಿಷಯವಾಗಿದೆ. ಸುವರ್ಣ ಸೌಧದ ಕಟ್ಟಡವು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇದ್ದು ಹತ್ತಾರು ಕಿಲೋಮೀಟರ ದೂರದಿಂದ ಕಾಣಿಸುವಂತಹ ಸ್ಥಳದಲ್ಲಿ ನಿರ್ಮಾಣಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಲಕ್ಷಾಂತರ ಜನ ಪ್ರಯಾಣಿಕರು ಈ ಮಾರ್ಗವಾಗಿ ಸಂಚರಿಸುತ್ತಾರೆ. ಇಂತಹ ಒಂದು ಐತಿಹಾಸಿಕ ಸುಂದರವಾದ ತಾಣದಲ್ಲಿ ಸುವರ್ಣ ಸೌಧದ ಪ್ರವೇಶ ದ್ವಾರದ ಪಕ್ಕದಲ್ಲಿ 108 ಅಡಿಯ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ಸ್ಥಾಪನೆ ಮಾಡಬೇಕೆಂದು ನಾಡಿನ ಸಮಸ್ತ ಕನ್ನಡಿಗರ ಪರವಾಗಿ ವಿನಂತಿ ಮಾಡಿಕೊಳ್ಳುತ್ತೇವೆ ಎಂದು ಸರಕಾರಕ್ಕೆ ರವಾನಿಸಿರುವ ಮನವಿಯಲ್ಲಿ ಒತ್ತಾಯಿಸಲಾಗಿದೆ.   

ನಮ್ಮ ಹಕ್ಕೊತ್ತಾಯ ಏನಂದರೆ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ಸ್ಥಾಪಿಸಲು ಬೆಳಗಾವಿ ಅದಿವೇಶನದ ಸಮಯದಲ್ಲಿ ಭೂಮಿ ಪೂಜೆ ಮಾಡಲೇಬೇಕು. 108 ಅಡಿಯಕ್ಕಿಂತ ಎತ್ತರದ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ಸ್ಥಾಪಿಸಲು ಯೋಜನೆಯನ್ನು ರೂಪಿಸಬೇಕು. ಇಲ್ಲದೇ ಹೋದರೆ ಎಲ್ಲ ಕನ್ನಡಪರ ಸಂಘಟನೆಗಳು ಸೇರಿಕೊಂಡು ಭೂಮಿ (ಗುದ್ದಲಿ ಪೂಜೆ ನೆರವೇರಿಸುತ್ತೇವೆ ಎಂಬ ಎಚ್ಚರಿಕೆಯನ್ನು ಕೊಡುತ್ತಾ ಹಾಗೂ ನಾಡಿನಾದ್ಯಂತ ದೇಣಿಗೆ ಸಂಗ್ರಹಿಸಿ 108 ಅಡಿಯ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ಸ್ಥಾಪಿಸಲು ಹೋರಾಟ ರೂಪಿಸುತ್ತೇವೆ ಎಂಬ ಕಠೋರ ಎಚ್ಚರಿಕೆ ಕೊಡುತ್ತಿದ್ದೇವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. 

ವಿಧಾನ ಮಂಡಲ ಅಧಿವೇಶನ ಸಮಯದ ಪೂರ್ವ ಈ ಬಗ್ಗೆ ನಿರ್ಣಯ ಪ್ರಕಟಿಸಿದಿದ್ದರೆ ನಮ್ಮ ಹೋರಾಟ ಮುಂದುವರೆಯುವದು ನಾಡಿನ ಸ್ವಾಭಿಮಾನದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ನಿರ್ಣಯ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.