ವಿಧಾನ ಪರಿಷತ್‌ಗೆ ಜೈನ ಸಮುದಾಯಕ್ಕೆ ಆದ್ಯತೆ ನೀಡುವಂತೆ ಒತ್ತಾಯ

ವಿಧಾನ ಪರಿಷತ್‌ಗೆ ಜೈನ ಸಮುದಾಯಕ್ಕೆ ಆದ್ಯತೆ ನೀಡುವಂತೆ ಒತ್ತಾಯ  Demand to prioritize the Jain community for the Legislative Council


ಹೊಸಪೇಟೆ, ಆ.6: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡುವ ಸಂದರ್ಭದಲ್ಲಿ ಜೈನ ಸಮುದಾಯಕ್ಕೆ ಆದ್ಯತೆ ನೀಡುವಂತೆ ರಾಜ್ಯ ಜೈನ್ ಅಸೋಸಿಯೇಷನ್ ಸದಸ್ಯ ಸಂತೋಷ್ ಜೈನ್ ಒತ್ತಾಯಿಸಿದ್ದಾರೆ.  

ಈ ಕುರಿತು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿರುವ ಅವರು, ಮಾಜಿ ಸಚಿವ ಡಿ. ಸುಧಾಕರ್ ಅವರ ಅಕಾಲಿಕ ನಿಧನದ ಬಳಿಕ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಜೈನ ಸಮುದಾಯದ ಪ್ರತಿನಿಧಿತ್ವ ಇಲ್ಲದಂತಾಗಿದೆ ಎಂದು ತಿಳಿಸಿದ್ದಾರೆ.  

ಆದ್ದರಿಂದ ಜೈನ ಸಮುದಾಯದ ಹಿರಿಯ ಮುಖಂಡ ಅಭಯಚಂದ್ರ ಜೈನ್ ಅವರನ್ನು ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡಿ, ಜೈನ ಸಮುದಾಯಕ್ಕೆ ರಾಜಕೀಯ ಪ್ರತಿನಿಧಿತ್ವ ಕಲ್ಪಿಸಬೇಕೆಂದು ಅವರು ಮನವಿ ಮಾಡಿದ್ದಾರೆ.