ಹೊಳಗುಂದಿ ಕಾಲುವೆಗೆ ನೀರು ಹರಿಸಲು ಆಗ್ರಹ
Demand to release water into Holagundi canal
ಹೂವಿನಹಡಗಲಿ, ಆ.12: ತಾಲೂಕಿನ ಹೊಳಗುಂದಿ ಕಾಲುವೆ ಹಾಗೂ ಬನ್ನಿಕಲ್ಲು ಕೆರೆಗೆ ನೀರು ಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಹೂವಿನಹಡಗಲಿ ತಾಲೂಕು ಘಟಕದ ಪದಾಧಿಕಾರಿಗಳು ಬುಧವಾರ ಸಿಂಗಟಾಲೂರು ಏತ ನೀರಾವರಿ ಇಲಾಖೆಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಈ ವರ್ಷ ಸಮರ್ಕ ಮುಂಗಾರು ಮಳೆಯಾಗದ ಕಾರಣ ತಾಲೂಕಿನಾದ್ಯಂತ ಕೆರೆಗಳು, ಗೋ ಕಟ್ಟೆಗಳು ಹಾಗೂ ಬೋರ್ವೆಲ್ಗಳು ಬಹುತೇಕ ಬತ್ತಿಹೋಗಿವೆ. ಇದರಿಂದ ರೈತರು ಹಾಗೂ ಜಾನುವಾರುಗಳು ತೀವ್ರ ಸಂಕಷ್ಟ ಎದುರಿಸುತ್ತಿವೆ ಎಂದು ರೈತ ಸಂಘದ ಮುಖಂಡರು ತಿಳಿಸಿದರು.
ದನ, ಕುರಿ, ಮೇಕೆ ಸೇರಿದಂತೆ ಜಾನುವಾರುಗಳಿಗೆ ಹಾಗೂ ಪಕ್ಷಿಗಳಿಗೆ ಕುಡಿಯುವ ನೀರು ದೊರೆಯದ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರ ಬೋರ್ವೆಲ್ಗಳಲ್ಲಿಯೂ ನೀರಿನ ಮಟ್ಟ ಕುಸಿದಿರುವುದರಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗಿದೆ. ದಿನದಿಂದ ದಿನಕ್ಕೆ ಜಾನುವಾರುಗಳು ಹಾಗೂ ಪಕ್ಷಿಗಳು ನೀರಿನ ಕೊರತೆಯಿಂದ ಬಳಲುತ್ತಿರುವುದು ಕಂಡುಬರುತ್ತಿದೆ ಎಂದು ಅವರು ಹೇಳಿದರು.
ಕೆರೆಗಳನ್ನು ತುಂಬಿಸಲು ಸರ್ಕಾರದ ಆದೇಶವಿದ್ದರೂ ಹೊಳಗುಂದಿ ಕಾಲುವೆ ಹಾಗೂ ಬನ್ನಿಕಲ್ಲು ಕೆರೆಗೆ ಇದುವರೆಗೆ ನೀರು ಹರಿದುಬಂದಿಲ್ಲ. ಕೂಡಲೇ ಕಾಲುವೆಗೆ ನೀರು ಹರಿಸಿ, ತಾಲೂಕಿನ ಎಲ್ಲ ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಗೋಣಿಬಸಪ್ಪ, ತಾಲೂಕು ಅಧ್ಯಕ್ಷ ಸಿದ್ದಪ್ಪ ಹೊಸಮನಿ, ಜಿಲ್ಲಾ ಗೌರವಾಧ್ಯಕ್ಷ ಬಾಣದ ಶಿವಪ್ಪ, ಜಿಲ್ಲಾ ಉಪಾಧ್ಯಕ್ಷ ಕೆ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಶಿವರಾಜ್ ಎಂ.ಹೊಳಗುಂದಿ, ಸಂಘಟನಾ ಕಾರ್ಯದರ್ಶಿ ಗೀರೀಶ್ ಡಿ., ಜಿಲ್ಲಾ ಕಾರ್ಯದರ್ಶಿ ದುರುಗಪ್ಪ, ಕೆ.ಮರಿಯಪ್ಪ, ಮಮದ್ ರಫಿ, ಹನುಮಂತಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 