ಬಸವೇಶ್ವರ ಎತ್ತಿನೀರಾವರಿ ಯೋಜನೆ ಕಾಲುವೆಗೆ ನೀರು ಹರಿಸಲು ಆಗ್ರಹ
Demand to release water into the Basaveshwara Lift Irrigation Project canal
ಸಂಬರಗಿ 06: ಗಡಿ ಪ್ರದೇಶವು ತೀವ್ರ ಬರಗಾಲದ ಸಂಕಷ್ಟ ಎದುರಿಸುತ್ತಿದ್ದು, ಬಸವೇಶ್ವರ ಎತ್ತಿನೀರಾವರಿ ಯೋಜನೆಯ ಕಾಲುವೆಗೆ ತಕ್ಷಣ ನೀರು ಹರಿಸುವಂತೆ ರೈತ ಹೋರಾಟಗಾರ ಹಾಗೂ ಹಿರಿಯ ವಕೀಲ ಎಸ್.ಎಸ್. ಪಾಟೀಲ ಸರ್ಕಾರವನ್ನು ಆಗ್ರಹಿಸಿದರು.
ಗಡಿ ಪ್ರದೇಶದ ಕಾಲುವೆ ಪರೀಶೀಲಿಸಿದ ಬಳಿಕ ಮದಭಾವಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗಿ ತರಕಾರಿ-ಮಹೈಸಾಳ ಯೋಜನೆಯ ನೀರು ಅಗರ್ ನದಿಗೆ ತಲುಪಿದ್ದರೂ, ಬಸವೇಶ್ವರ ಎತ್ತಿನೀರಾವರಿ ಯೋಜನೆಯ ಕಾಲುವೆಗೆ ಇನ್ನೂ ನೀರು ಬಿಡದಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ ಎಂದು ಹೇಳಿದರು.
ತಾಲೂಕಿನಲ್ಲಿ ಮಳೆ ಕೊರತೆಯಿಂದ ಮುಂಗಾರು ಬೆಳೆ ಶೇ.50ರಷ್ಟು ಹಾನಿಗೊಳಗಾಗಿದೆ. ಕಬ್ಬು ಸೇರಿದಂತೆ ವಿವಿಧ ಬೆಳೆಗಳು ನೀರಿನ ಅಭಾವದಿಂದ ಒಣಗುತ್ತಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ಹಾನಿ ಸಮೀಕ್ಷೆ ನಡೆಸಿ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ನೀರಿನ ಕೊರತೆಯಿಂದ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಕೂಲಿ ಕಾರ್ಮಿಕರಿಗೆ ಉದ್ಯೋಗವೂ ಇಲ್ಲದಂತಾಗಿದೆ. ಪರಿಣಾಮವಾಗಿ ಅನೇಕರು ಮಹಾರಾಷ್ಟ್ರದ ಸಾಂಗ್ಲಿ, ಕೊಲ್ಹಾಪುರ ಹಾಗೂ ಸಾತಾರ ಜಿಲ್ಲೆಗಳಿಗೆ ಉದ್ಯೋಗ ಅರಸಿ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದರು.
ಮಹಾರಾಷ್ಟ್ರದಲ್ಲಿ ಕೃಷ್ಣಾ ನದಿ ತುಂಬಿ ಹರಿಯುತ್ತಿದ್ದರೂ, ಗಡಿ ಭಾಗದ ಕಾಲುವೆಗಳಿಗೆ ನೀರು ಹರಿಸದಿರುವುದು ಸರಿಯಲ್ಲ. ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ನೀರು ಬಿಡುಗಡೆ ಮಾಡಬೇಕು. ಗಡಿ ಭಾಗದ ಬಾಕಿ ಇರುವ ನೀರಾವರಿ ಕಾಮಗಾರಿಗಳನ್ನೂ ಶೀಘ್ರ ಪೂರ್ಣಗೊಳಿಸಿ ರೈತರ ಸಂಕಷ್ಟ ನಿವಾರಿಸಬೇಕು ಎಂದು ಎಸ್.ಎಸ್. ಪಾಟೀಲ ಆಗ್ರಹಿಸಿದರು. ಈ ಸಂದರ್ಭದಲ್ಲಿ ಬಿ.ಎಂ. ಹಿಪ್ಪಳಗಾರ್, ಚೇತನ ಪಾಟೀಲ, ಎಂ.ವಿ. ಪೂಜಾರಿ, ಸಂಜಯ ಕಾಗವಾಡಿ, ಪಿ.ಆರ್. ಕಾಶಿದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 