ಎಪಿಎಂಸಿ ಮಾರುಕಟ್ಟೆಯನ್ನು ಸ್ಥಳಾಂತರಿಸಲು ಆಗ್ರಹ
Demand to relocate APMC market
ಶಿರಹಟ್ಟಿ 06: ಸಂಚಾರ ದಟ್ಟಣೆ, ಸ್ವಚ್ಛತೆ ಸಮಸ್ಯೆಯಿಂದ ಸಾರ್ವಜನಿಕರಿಗೆ ತೊಂದರೆ ಶಿರಹಟ್ಟಿ: ಪಟ್ಟಣದ ಹೃದಯ ಭಾಗದಲ್ಲಿರುವ ಅತೀ ಹೆಚ್ಚು ಬೆಲೆಬಾಳುವ ಎಪಿಎಂಸಿ ಜಾಗೆ ಸದ್ಯ ಕಸ ಶೇಖರಣಾ ಸ್ಥಳವಾಗಿ ಮಾರ್ಪಟಟಿದ್ದು, ಪಕ್ಕದಲ್ಲಿರುವ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಮೂಗು ಮುಚ್ಚಿಕೊಂಡು ಬಸ್ ಹತ್ತುವ ದುಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಎಪಿಎಂಸಿ ಮಾರುಕಟ್ಟೆಯನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸಿ ಅಭಿವೃದ್ಧಿಪಡಿಸಬೇಕು ಎಂದು ಪಟ್ಟಣದ ನಾಗರಿಕರು ಹಾಗೂ ತಾಲೂಕಿನ ರೈತರು ಆಗ್ರಹಿಸಿದ್ದಾರೆ.
ಎಪಿಎಂಸಿ ಆವರಣದಲ್ಲಿ ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತಿರುವುದರಿಂದ ಪರಿಸರ ಅಸ್ವಚ್ಛಗೊಂಡಿದೆ. ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ಎಪಿಎಂಸಿ ಮಾರುಕಟ್ಟೆಯನ್ನು ಸಮರ್ಕವಾಗಿ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ, ನಾಗರಿಕರು ಹಾಗೂ ರೈತರ ಪರವಾಗಿ ತಹಶೀಲ್ದಾರ್ ಕೆ. ರಾಘವೇಂದ್ರರಾವ್ ಅವರ ಮೂಲಕ ಮಂಗಳವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮುಖಂಡ ಸಂತೋಷ ಕುರು ಮಾತನಾಡಿ, ಪಟ್ಟಣದಲ್ಲಿ ದಿನನಿತ್ಯದ ಸಂತೆಯ ಜೊತೆಗೆ ಭಾನುವಾರ ನಡೆಯುವ ಸಂತೆ ಕೂಡ ಕಿಕ್ಕಿರಿದ ಮಾರುಕಟ್ಟೆ ಪ್ರದೇಶದಲ್ಲಿಯೇ ನಡೆಯುತ್ತಿದೆ. ಇದರಿಂದ ಸಾರ್ವಜನಿಕರಿಗೆ ಪ್ರತಿನಿತ್ಯ ಸಂಚಾರದ ಕಿರಿಕಿರಿ ಹಾಗೂ ತೊಂದರೆ ಉಂಟಾಗುತ್ತಿದೆ ಎಂದು ಹೇಳಿದರು.
ಗ್ರಾಮೀಣ ಪ್ರದೇಶಗಳಿಂದ ವಿವಿಧ ಕೆಲಸಗಳಿಗಾಗಿ ಪಟ್ಟಣಕ್ಕೆ ಆಗಮಿಸುವ ಜನರು ತಾಲೂಕು ಆಸ್ಪತ್ರೆ, ತಾಲೂಕು ಪಂಚಾಯಿತಿ, ಪೊಲೀಸ್ ಠಾಣೆ, ಪಟ್ಟಣ ಪಂಚಾಯಿತಿ ಸೇರಿದಂತೆ ಹಲವು ಸರ್ಕಾರಿ ಕಚೇರಿಗಳಿಗೆ ಇದೇ ಮಾರುಕಟ್ಟೆ ರಸ್ತೆಯ ಮೂಲಕ ಸಂಚರಿಸಬೇಕಾಗಿದೆ. ಮಾರುಕಟ್ಟೆ ಪ್ರದೇಶದಲ್ಲಿ ಉಂಟಾಗುವ ವಾಹನ ದಟ್ಟಣೆಯಿಂದಾಗಿ ಅವಸರದ ಸಂದರ್ಭದಲ್ಲಿ ಸಂಚರಿಸುವವರಿಗೆ ತೊಂದರೆಯಾಗುವುದರ ಜೊತೆಗೆ ಹಲವು ಅಪಘಾತಗಳೂ ಸಂಭವಿಸಿವೆ ಎಂದು ಅವರು ತಿಳಿಸಿದರು.
ಕೂಡಲೇ ಎಪಿಎಂಸಿ ಕಟ್ಟಡ ಹಾಗೂ ಆವರಣವನ್ನು ದುರಸ್ತಿ ಮತ್ತು ಸ್ವಚ್ಛಗೊಳಿಸಿ, ದಿನನಿತ್ಯ ಹಾಗೂ ಭಾನುವಾರದ ಸಂತೆಗಳನ್ನು ಸೂಕ್ತ ಪರ್ಯಾಯ ಸ್ಥಳಕ್ಕೆ ಸ್ಥಳಾಂತರಿಸಬೇಕು. ಎಪಿಎಂಸಿ ಮಾರುಕಟ್ಟೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ, ದನಗಳ ಮಾರುಕಟ್ಟೆ ಸೇರಿದಂತೆ ರೈತರ ವಿವಿಧ ಬೆಳೆಗಳ ವ್ಯಾಪಾರ-ವಹಿವಾಟು ನಡೆಸಲು ಅನುಕೂಲ ಕಲ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಕುರಿತು ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಹೋರಾಟದ ಮೂಲಕ ಬೇಡಿಕೆ ಈಡೇರಿಸಿಕೊಳ್ಳಬೇಕಾಗುತ್ತದೆ ಎಂದು ಮುಖಂಡರು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ರಾಮಣ್ಣ ಕಂಬಳಿ, ನಾಗರಾಜ ಲಕ್ಕುಂಡಿ, ವಿಠ್ಠಲ ವಿಡವೆ, ಪರಶುರಾಮ ಡೊಂಕಬಳ್ಳಿ, ಬಸವರಾಜ ವಡವಿ, ಬಸವರಾಜ ತುಳಿ, ಶಿವು ಬಟ್ಟೂರ, ದೇವು ಪೂಜಾರ, ಚಂದ್ರು ಜೋಗೆರ, ಸಂತೋಷ ತೋಡೆಕರ, ಬಸವರಾಜ ಕಲ್ಯಾಣಿ, ಶಶಿ ಪೂಜಾರ, ಜಗದೀಶ ತೇಲಿ, ಮಾರುತಿ ಕೋಳಿ, ಪಕ್ಷಣ್ಣ ಪವಾರ್, ಹನುಮಂತ ಕುರು, ವಿಶ್ವನಾಥ ದಳವೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 