ಧಾರವಾಡದ ಲಾಳಗಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ಆಗ್ರಹಿಸಿ
Demand to save the Government Higher Primary School in Lalagatti village, Dharwad
ಧಾರವಾಡ 02: ಇಂದು ಎಐಡಿಎ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಹೆಸರಿನಲ್ಲಿ ರಾಜ್ಯದ 40,000 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಧಾರವಾಡದ ಲಾಳಗಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳಿಸಬೇಕು ಎಂದು ಊರಿನ ಪೋಷಕರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಉದ್ದೇಶಿಸಿ ಎಐಡಿಎ?ಜಿಲ್ಲಾ ಕಾರ್ಯದರ್ಶಿಗಳಾದ ಶಶಿಕಲಾ ಮೇಟಿ ಮಾತನಾಡುತ್ತಾ... ಕೆಪಿಎಸ್ ಮ್ಯಾಗ್ನೆಟ್ ಶಾಲೆಯ ದೇವರಹುಬ್ಬಳ್ಳಿ ಗ್ರಾಮಕ್ಕೆ ಕಳುಹಿಸಲು ಲಾಳಗಟ್ಟಿ ಗ್ರಾಮದಜನರಿಗೆ ಸಮ್ಮತಿ ಇರುವುದಿಲ್ಲ. ಏಕೆಂದರೆ ಇಲ್ಲಿ ವಾಸಿಸುವ ಜನರೆಲ್ಲಾ ರೈತರು, ಕಾರ್ಮಿಕರು ಅವರೆಲ್ಲರೂ ಬೆಳಿಗ್ಗೆ ಹೊಲದ ಕೆಲಸಕ್ಕೆ ಹೋದರೆ ಬರುವುದು ಸಾಯಂಕಾಲ ಆಗುತ್ತದೆ. ಹಾಗಾಗಿ ತಮ್ಮ ಮಕ್ಕಳನ್ನು ಇಡೀ ದಿನ ಸರ್ಕಾರಿ ಶಾಲೆಗಳ ಮೇಲೆ ನಂಬಿಕೆಯಿಂದ ಶಿಕ್ಷಣ ಕಲಿಯಲು ಬಿಟ್ಟು ಹೋಗುತ್ತಾರೆ. ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ಹೋಗಬೇಕೆಂದರೆ ಮೂರು ಕಿಲೋ ಮೀಟರ್ ದೂರದಲ್ಲಿರುವ ದೇವರ ಹುಬ್ಬಳ್ಳಿ ಗ್ರಾಮಕ್ಕೆ ಹೋಗಲು ಈ ಚಿಕ್ಕ ಮಕ್ಕಳಿಗೆ ಸಾಧ್ಯವಿಲ್ಲ.., ಆದ್ದರಿಂದ 40ಕ್ಕೂ ಹೆಚ್ಚು ಮಕ್ಕಳು ಇರುವ ಈ ಶಾಲೆಯ ಶಿಕ್ಷಣಕ್ಕೆ ಒತ್ತು ನೀಡಬೇಕು, ಈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಲಾಳಗಟ್ಟಿ ಗ್ರಾಮದಲ್ಲಿ ಯಾವುದೇ ಶಾಲೆ ಕಾರಣಕ್ಕೂ ಮುಚ್ಚಬಾರದು ಎಂದು ಶಾಲೆಯನ್ನು ಉಳಿಸಲು ಆಗ್ರಹಿಸಿ ಎಐಡಿಎ? ಹಾಗೂ ಲಾಳಗಟ್ಟಿ ಗ್ರಾಮದ ಪೋಷಕರು ಆಗ್ರಹವಾಗಿದೆ.
ಕರ್ನಾಟಕ ರಾಜ್ಯದಲ್ಲಿ ಮುಚ್ಚುತ್ತಿರುವ 40 ಸಾವಿರಕ್ಕೂ ಹೆಚ್ಚು ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವರಾಜ್ಯ ಸರ್ಕಾರವು ಮುಂದಾಗಿದೆ... ಆದರೆ ನಮ್ಮರಾಜ್ಯದ ಶಿಕ್ಷಣ ಸಚಿವರು ಮಾತ್ರ ಬರೀ ಹಸಿ ಸುಳ್ಳು ಹೇಳುತ್ತಿದ್ದಾರೆ. ಪತ್ರಿಕೆಯ ಮುಂದೆ ಶಾಲೆ ಮುಚ್ಚಲ್ಲಅಂತ ಹೇಳಿ, ಇಲಾಖೆಯಿಂದ ಸರ್ಕಾರಿ ಶಾಲೆಗಳನ್ನು ಮುಚ್ಚಲು ಪಟ್ಟಿ ಬಿಡುಗಡೆ ಮಾಡುತ್ತಿದ್ದಾರೆ ಹಾಗೂ ಆದೇಶಯಾಕೆ ಹೊರಡಸುತ್ತಿದ್ದಾರೆ? ಈ ದೇಶದ ಶಿಕ್ಷಣಕ್ಕಾಗಿ ಪ್ರಾಣವನ್ನು ಪಣಕ್ಕಿಟ್ಟು ಶಿಕ್ಷಣವು ಪ್ರತಿಯೊಬ್ಬರಿಗೂ ತಲುಪಬೇಕು ಎಂಬ ಆಶಯವು ಮಹಾನ್ ಮಾನವತಾವಾದಿ ಜ್ಯೋತಿರಾವ್ ಫುಲೆ, ಸಾವಿತ್ರಿ ಬಾಯಿ ಹಾಗೂ ಮಹಾನ್ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ನೇತಾಜಿ ಸುಭಾಷ್‌ಚಂದ್ರ ಬೋಸ್‌ರವರದ್ದು ಆಗಿತ್ತು. ಆದರೆ ಸ್ವಾತಂತ್ರ್ಯ ನಂತರ ಅಧಿಕಾರಕ್ಕೆ ಬಂದಎಲ್ಲಾ ಸರ್ಕಾರಗಳು ಶಿಕ್ಷಣದ ಬಾಗಿಲು ಮುಚ್ಚಿ, ಖಾಸಗೀಕರಣ ಮಾಡಿ ಬಡವರಿಂದ ಶಿಕ್ಷಣವನ್ನು ಕಸಿಯುತ್ತಿರುವ ಸರ್ಕಾರಗಳ ಹುನ್ನಾರಇದಾಗಿದೆ. ಆದ್ದರಿಂದಎಲ್ಲಾ ಪೋಷಕರು ವಿದ್ಯಾರ್ಥಿಗಳು ಜನ ಸಮಿತಿ ರಚಿಸಿಕೊಂಡು ಒಗ್ಗಟ್ಟಾಗಿ, ಚಳುವಳಿಗಳನ್ನು ಕಟ್ಟಲು ಮುಂದಾಗಬೇಕು ಎಂದುಕರೆ ನೀಡಿದರು. ಈ ಸಂದರ್ಭದಲ್ಲಿ ಎಐಡಿಎ?ಕಛೇರಿ ಕಾರ್ಯದರ್ಶಿ ಸ್ಫೂರ್ತಿ ಚಿಕ್ಕಮಠ ಸದಸ್ಯ ಸಿದ್ದು ಚಿಪ್ಪಲಕಟ್ಟಿ , ಹಾಗೂ ವಿದ್ಯಾರ್ಥಿಗಳು ಪೋಷಕರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 