ಅಕ್ರಮ ಮರಳು ಗಣಿಗಾರಿಕೆ ತಡೆಗೆ ಒತ್ತಾಯ
Demand to stop illegal sand mining
ಹೂವಿನಹಡಗಲಿ 22: ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳುತ್ತಿಲ್ಲವೆಂದು ಆರೋಪಿಸಿ ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ ಮತ್ತು ವಿವಿಧ ದಲಿತ ಸಂಘಟನೆಗಳಿಂದ ಬುಧವಾರ ಪ್ರತಿಭಟನೆ ಮಾಡಿದರು. ತುಂಗಭದ್ರಾ ನದಿ ತೀರದ ತಾಲೂಕಿನ ಹರವಿ, ನವಲಿ ಸೋವೇನಹಳ್ಳಿ, ಮೈಲಾರ ಹೊನ್ನೂರು ಗ್ರಾಮಗಳ ನದಿ ತೀರದಲ್ಲಿ ರಾತ್ರಿ ವೇಳೆ ಅಕ್ರಮವಾಗಿ ಮರಳುಗಾರಿಕೆ ದಂಧೆ ರಾಜಾರೋಷವಾಗಿ ನಡೆಯುತ್ತಿದ್ದು, ಕಡಿವಾಣ ಹಾಕದೆ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಪರೋಕ್ಷವಾಗಿ ಅಕ್ರಮ ಮರಳು ಲೂಟಿಕೋರರಿಗೆ ಅಧಿಕಾರಿಗಳು ಸಾತ್ ನೀಡುತ್ತಿದ್ದಾರೆಂದು ಆರೋಪಿಸಿದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ತಹಶಿಲ್ದಾರರ ಮೂಲಕ ಮನವಿ ಸಲ್ಲಿಸಿದರು. ಕೆ ಆರ್ ಎಸ್ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷರಾದ ಸುಭಾನಿಸಾಬ್ ಮಾತನಾಡಿ, ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ ದಂಧೆಗೆ ಕಡಿವಾಣ ಹಾಕದೇ ಅಧಿಕಾರಿಗಳು ತಮಗೇನು ಗೊತ್ತಿಲ್ಲ ಎಂಬಂತೆ ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ ಎಂದು ದೂರಿದರು. ದಲಿತ ಸೇನೆ ಮುಖಂಡ ದುರ್ಗೇಶ್, ದೇವೇಂದ್ರ್ಪ ಮಾತನಾಡಿದರು. ಈ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕ ಸಂಘದ ತಾಲೂಕ ಅಧ್ಯಕ್ಷ ಜಂಗ್ಲಿ ಸಾಬ್, ಎ ಎಸ್ ಎಸ್ ಕೆ. ಭರ್ಮಪ್ಪ, ಎಸ್ ಡಿ ಪಿ ಐ ನ ದೇವರಾಜ್, ಕಿಸಾನ್ ಸಭಾ ತಾಲೂಕ ಅಧ್ಯಕ್ಷ ಡಿ ಮುಕುಂದ ಗೌಡ. ಶರಣಪ್ಪ ಅವಿನಾಶ ಸೇರಿದಂತೆ ಇತರರು ಇದ್ದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 