ಭೂ ಪರಿವರ್ತನೆ ಆದೇಶ ಹಿಂಪಡೆಯಲು ಆಗ್ರಹ
Demand to withdraw land conversion order
ಭೂ ಪರಿವರ್ತನೆ ಆದೇಶ ಹಿಂಪಡೆಯಲು ಆಗ್ರಹ
ವಿಜಯಪುರ 09: ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಡೋಣಿ ನದಿ ಪ್ರವಾಹ ಪೀಡಿತ ಪ್ರದೇಶದಲ್ಲಿ ಜಿಲ್ಲಾಡಳಿತ ವಸತಿ ಉದ್ದೇಶಕ್ಕೆ ನೀಡಿರುವ ಭೂ ಪರಿವರ್ತನೆ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಾಲ್ಮಿಕಿ ಸಮಾಜ ಸೇವಾ ಸಂಘದಿಂದ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹಾಗೂ ಜಿಲ್ಲಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಾಲ್ಮಿಕಿ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಮಾತನಾಡಿ, ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಸಾರವಾಡ ಗ್ರಾಮದ ಪ್ರವಾಹ ಪೀಡಿತ ರಿ.ಸ.ನಂ.613*/1 ರ ಜಮೀನಿಗೆ ಭೂ ಪರಿವರ್ತನೆಗೆ ವಿಜಯಪುರ ಜಿಲ್ಲಾಡಳಿತ ಅನುಮತಿ ನೀಡಿದ್ದು ಕಾನೂನು ಬಾಹೀರವಾಗಿದೆ ಕೂಡಲೇ ನೀಡಿರುವ ಅನುಮತಿಯನ್ನು ಹಿಂಪಡೆದು ಮುಂದೆ ಆಗುವ ಜನ, ಜಾನುವಾರ ಹಾಗೂ ಸಾರ್ವಜನಿಕ ಆಸ್ತಿ, ಪಾಸ್ತಿಗಳಿಗೆ ಹಾನಿಯಾಗುವುದನ್ನು ತಡೆಗಟ್ಟೆಬೇಕೆಂದು ಒತ್ತಾಯಿಸಿದರು.
ಈ ಕುರಿತು ಈಗಾಗಲೇ ಜಿಲ್ಲಾಡಳಿತ ಸಂಬಂಧಿಸಿದ ಬಬಲೇಶ್ವರ ತಾಲೂಕಾ ಆಡಳಿತ ಸಂಬಂಧಿಸಿದ ಸಾರವಾಡ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿಕೊಂಡಿದ್ದರೂ ಕೂಡಾ ನಿರಂತರವಾಗಿ ಭೂ ಪರಿವರ್ತನೆಗೆ ಯತ್ನಿಸುತ್ತಿರುವುದರ ಹಿಂದೆ ಕಾಣದ ಸಮಾಜ ಘಾತುಕ ರಾಜಕೀಯ ಶಕ್ತಿಗಳು ಕೆಲಸ ಮಾಡುತ್ತಿವೆ. ಇದರ ಹಿಂದೆ ಜನರ ಜೀವ ಆಸ್ತಿ ಪಾಸ್ತಿ ಹಾನಿಮಾಡುವ ದುರುದ್ದೇಶವಿದೆ ಎಂದು ಗಂಭೀರ ಆರೋಪ ಮಾಡಿದ ಅವರು, ಜಿಲ್ಲಾಡಳಿತ ಭೂ ಪರಿವರ್ತನೆ ಆದೇಶವನ್ನು ರದ್ದುಪಡಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಸಾರವಾಡ ಗ್ರಾಮದ ಜನರ ಹಿತ ಕಾಪಾಡಲು ಕಾನೂನು ಹೋರಾಟದ ಮೂಲಕ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಹೋರಾಟಗಾರ ಜಗದೇವ ಸೂರ್ಯವಂಶಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 