ಅಗ್ನಿ ಅವಘಡ ಕುರಿತು ಪ್ರಾತ್ಯಕ್ಷತೆ

Demonstration on fire accident

ಅಗ್ನಿ ಅವಘಡ ಕುರಿತು ಪ್ರಾತ್ಯಕ್ಷತೆ  

ಕಾರವಾರ 19 :- ಜಿಲ್ಲಾಡಳಿತ ಹಾಗೂ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ ಸಿಬ್ಬಂದಿಗಳಿಗೆ ಅಗ್ನಿ ಅವಘಡಗಳನ್ನು ಎದುರಿಸುವ ಕುರಿತ ಕಾರ್ಯಗಾರವನ್ನು ಜಿಲ್ಲಾಧಿಕಾರಿ ಕೆ.  ಗುರುವಾರ ಉದ್ಘಾಟಿಸಿದರು.  

ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಅಗ್ನಿನಿವಾರಣೆ ಮತ್ತು ಅಗ್ನಿಶಮನದ ಬಗ್ಗೆ ಉಪನ್ಯಾಸ ಮತ್ತು ಪ್ರಾತ್ಯಕ್ಷತೆಯನ್ನು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಯಲ್ಲಾಪುರ ಅಗ್ನಿಶಾಮಕ ಠಾಣಾಧಿಕಾರಿ ಶಂಕರ ಅಂಗಡಿ ನೇತೃತ್ವದ ತಂಡದಿಂದ ನಡೆಸಲಾಯಿತು.  

 ಈ ಸಂದರ್ಭದಲ್ಲಿ, ಅಪರ ಜಿಲ್ಲಾಧಿಕಾರಿ ಸಾಜೀದ್ ಅಹ್ಮದ್ ಮುಲ್ಲಾ, ಉಪ ವಿಭಾಗಾಧಿಕಾರಿ ಕನಿಷ್ಕ, ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಜರಿದ್ದರು.