ನಾಗಾವಿ ಶಾಲೆಯಲ್ಲಿ ಡೆಂಗ್ಯೂ ಜಾಗೃತಿ ಕಾರ್ಯಕ್ರಮ
Dengue awareness program at Nagavi School
ಗದಗ 22: ತಾಲೂಕಿನ ನಾಗಾವಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ನಾಗಾವಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿ ಹಾಗೂ ಜಿಲ್ಲಾ ಐಇಸಿ ವಿಭಾಗದ ಸಹಯೋಗದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಡೆಂಗ್ಯೂ ವಿರೋಧಿ ಮಾಸಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಮುದಾಯದ ಸಹಭಾಗಿತ್ವ ಅಗತ್ಯವೆಂದು ತಿಳಿಸಿ, ಮನೆ ಹಾಗೂ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು, ನೀರಿನ ಪಾತ್ರೆಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವುದು, ಮುಚ್ಚಿ ಇಡುವುದು ಹಾಗೂ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುವ ಪರಿಸರವನ್ನು ನಿರ್ಮೂಲನೆ ಮಾಡುವಂತೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.
ಮನೆಗಳಲ್ಲಿ ಬಳಸದೆ ಇರುವ ಟೈರ್, ಪ್ಲಾಸ್ಟಿಕ್ ಪಾತ್ರೆಗಳು, ಕುಂಡಿಗಳು, ಫ್ರಿಜ್ ಟ್ರೇ, ಹಳೆಯ ಡಬ್ಬಿಗಳು ಸೇರಿದಂತೆ ನೀರು ನಿಲ್ಲುವ ವಸ್ತುಗಳಲ್ಲಿ ಎಡಿಸ್ ಸೊಳ್ಳೆಗಳು ಬೆಳೆಯುವ ಸಾಧ್ಯತೆ ಇರುವುದರಿಂದ ಅವುಗಳನ್ನು ಸ್ವಚ್ಛವಾಗಿಡಬೇಕು. ವಾರಕ್ಕೊಮ್ಮೆ ‘ಡ್ರೈ ಡೇ’ ಆಚರಿಸುವ ಮೂಲಕ ಸೊಳ್ಳೆಗಳ ಉತ್ಪತ್ತಿ ತಡೆಯಬಹುದೆಂದು ಸಲಹೆ ನೀಡಲಾಯಿತು.
ಬಳಿಕ ಆರೋಗ್ಯ ನೀರೀಕ್ಷಣಾಧಿಕಾರಿ ಎಸ್.ಸಿ. ಕರಡಿಗುಡ್ಡ ಮಾತನಾಡಿ, ಡೆಂಗ್ಯೂ ಜ್ವರದ ಲಕ್ಷಣಗಳು, ತಡೆಗಟ್ಟುವ ಕ್ರಮಗಳು, ವೈಯಕ್ತಿಕ ಸ್ವಚ್ಛತೆ, ಕಲುಷಿತ ಆಹಾರ ಹಾಗೂ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಜೆ.ಆರ್. ಏಕಬೋಟೆ, ಸಹ ಶಿಕ್ಷಕರಾದ ಎ.ಎ. ಬಂಡಿವಾಡಮಠ, ಜೆ.ಎಂ. ಮುತ್ತಿನಪೆಂಡಿಮಠ, ಎಂ.ಎಂ. ಬಾಗಲಿ, ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಎಸ್.ಎಲ್. ಹಬೀಬ್ ಹಾಗೂ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 