ಲೋಕದರ್ಶನ ವರದಿ
ಗದಗ: ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಸಚಿವರಾದ ಸಿ.ಟಿ.ರವಿಯವರಿಗೆ ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ. ಶರಣು ಗೋಗೇರಿ ಯವರ ನೇತೃತ್ವದಲ್ಲಿ ಗದಗ ಜಿಲ್ಲೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕಾ ಸಾಹಿತ್ಯ ಭವನಗಳ ನಿರ್ಮಾಣ ಅನುದಾನ ಮಂಜೂರು ಮಾಡಲು ಮನವಿ ಸಲ್ಲಿಸಲಾಯಿತು.
ಜಿಲ್ಲಾಡಳಿತ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಸಚಿವರಾದ ಸಿ.ಟಿ.ರವಿ ಯವರಿಗೆ ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಯೋಗದ ಮೂಲಕ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿರುವ ಸಾಹಿತ್ಯ ಭವನದ ಮುಂದುವರೆದ ಕಾಮಗಾರಿ, ಲಕ್ಷ್ಮೇಶ್ವರದಲ್ಲಿರುವ ಕನ್ನಡ ಸಾಹಿತ್ಯ ಭವನದ ಮುಂದುವರೆದ ಕಾಮಗಾರಿ ಹಾಗೂ ಮುಂಡರಗಿಯಲ್ಲಿರುವ ಕನ್ನಡ ಸಾಹಿತ್ಯ ಭವನಗಳ ನಿರ್ಮಾಣಕ್ಕೆ ತಲಾ 20 ಲಕ್ಷ ರೂಗಳಂತೆ ಒಟ್ಟು 60 ಲಕ್ಷ ರೂ ಮಂಜೂರು ಮಾಡಲು ಮನವಿ ಸಲ್ಲಿಸಲಾಯಿತು.
ಸಚಿವರನ್ನು ಇದೇ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನಿಸಲಾಯಿತು. ಸಚಿವರನ್ನು ಭೇಟಿಯಾದ ನಿಯೋಗದಲ್ಲಿ ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಶರಣು ಗೋಗೇರಿ , ಮಾಜಿ ಅಧ್ಯಕ್ಷರಾದ ಕೆ.ಬಿ.ತಳಗೇರಿ, ಅಂದಾನೆಪ್ಪ ವಿಭೂತಿ, ಗೌರವ ಕಾರ್ಯದರ್ಶಿಗಳಾದ ಪ್ರಕಾಶ ಮಂಗಳೂರ, ಅಶೋಕ ಹಾದಿ, ಸಹ ಕಾರ್ಯದಶರ್ಿಗಳಾದ ಸಿ.ಕೆ.ಕೇಸರಿ, ರತ್ನಕ್ಕ ಪಾಟೀಲ, ರಾಜಕುಮಾರ ಸೊಪ್ಪಡ್ಲ, ಮೊದಲಾದವರು ಉಪಸ್ಥಿತರಿದ್ದರು.