ಬ್ಯಾಂಕ್ ಗಳಲ್ಲಿ ಠೇವಣಿದಾರರ ಹಣ ಸಂಪೂರ್ಣ ಸುರಕ್ಷಿತ- ಹಣಕಾಸು ಸಚಿವರ ಭರವಸೆ

deposit

ನವದೆಹಲಿ, ಫೆ 1-ಷೆಡ್ಯೂಲ್ಡ್ ವಾಣಿಜ್ಯ ಬ್ಯಾಂಕುಗಳಲ್ಲಿ ಠೇವಣಿದಾರರ ಹಣ ಸಂಪೂರ್ಣ ಸುರಕ್ಷಿತವಾಗಿರಲಿದ್ದು, ಇದರ ಮೇಲ್ವಿಚಾರಣೆಗೆ ಬಿಗಿಯಾದ ಕಾರ್ಯವ್ಯವಸ್ಥೆ ಇದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 

‘ಎಲ್ಲ ಷೆಡ್ಯೂಲ್ಡ್ ವಾಣಿಜ್ಯ ಬ್ಯಾಂಕ್ ಗಳ ವಾಣಿಜ್ಯ ವಹಿವಾಟು ಮತ್ತು ಅವುಗಳ ಸ್ಥಿತಿಯನ್ನು ಮೇಲ್ವಿಚಾರಣೆ ಸೂಕ್ತ ಕಾರ್ಯ ವ್ಯವಸ್ಥೆ ಜಾರಿಯಲ್ಲಿದ್ದು,  ಠೇವಣಿದಾರರ ಹಣ ಸಂಪೂರ್ಣವಾಗಿ ಸುರಕ್ಷಿತವಾಗಿದೆ.’ ಎಂದು ಶನಿವಾರ ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಹೇಳಿದ್ದಾರೆ.

‘ತೆರಿಗೆದಾರರು ಯಾವುದೇ ರೀತಿಯ ಕಿರುಕುಳಕ್ಕೆ ಒಳಗಾಗದಿರುವಂತೆ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ಬದ್ಧವಾಗಿದೆ.’ ಎಂದು ಸಚಿವರು ಪ್ರತಿಪಾದಿಸಿದ್ದಾರೆ.ಎಲ್‍ಐಸಿಯಲ್ಲಿ ಸ್ವಲ್ಪ ಭಾಗವನ್ನು ಐಪಿಒ ಮೂಲಕ ಮಾರಾಟ ಮಾಡಲಾಗುವುದು. ಎನ್‍ಬಿಎಫ್‍ಸಿ ಮತ್ತು ಗೃಹ ಹಣಕಾಸು ನಿಗಮಗಳ ನಗದು ಸಮಸ್ಯೆಗಳನ್ನು ನಿವಾರಿಸಲು ಕಾರ್ಯವ್ಯವಸ್ಥೆ ರೂಪಿಸಲಾಗುವುದು. ಠೇವಣಿ ವಿಮೆ ಮತ್ತು ಸಾಲ ಖಾತರಿ ನಿಗಮಕ್ಕೆ ಠೇವಣಿ ವಿಮಾ ರಕ್ಷಣೆಯನ್ನು ಸದ್ಯದ ಒಂದು ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಿಸಲು ಅನುಮತಿ ನೀಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.