ಆರಂಭಗೊಂಡ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಭೇಟಿ, ಪರೀಶೀಲನೆ
Deputy Commissioner Dr. Ananda K. visits and inspects the SSLC examination centers that have been st
ಲೋಕದರ್ಶನ ವರದಿ
ವಿಜಯಪುರ,ಮಾ.18 : ಜಿಲ್ಲೆಯ 137 ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ಪ್ರಥಮ ಭಾಷೆ ಪರೀಕ್ಷೆ ನಡೆಯಿತು. ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ನಗರದ ಶಾಂತಿನಿಕೇತನ ಹಾಗೂ ಲೋಯೆಲಾ ಶಾಲೆಗೆ ಭೇಟಿ ನೀಡಿ, ಪರೀಶೀಲನೆ ನಡೆಸಿದರು. ವಿದ್ಯಾರ್ಥಿಗಳು ಯಾವುದೇ ರೀತಿಯ ಗೊಂದಲ ಮಾಡಿಕೊಳ್ಳದೇ, ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಇದೇ ವೇಳೆ ಆತ್ಮಸ್ಥೈರ್ಯ ತುಂಬಿದರು.
ಪರೀಕ್ಷೆಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ನಿರ್ವಹಿಸಬೇಕು. ಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಮಹತ್ವದ ಘಟ್ಟವಾಗಿರುವುದರಿಂದ ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳು ಬಾರದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ದೂರಿಗೆ ಆಸ್ಪದೆ ನೀಡದೇ ಪರೀಕ್ಷಾ ನಿಯಮಗಳನ್ನುನಸರಿಸಿ, ಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ತಮಗೆ ವಹಿಸಿದ ಪರೀಕ್ಷಾ ಕಾರ್ಯಗಳನ್ನು ಅತ್ಯಂತ ಜವಾಬ್ದಾರಿಯಿಂದ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.
ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ಅಳವಡಿಸಿರುವ ಗಣಕಯಂತ್ರಗಳು, ಎ??? ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳ ವ್ಯವಸ್ಥೆಗಳು ಮತ್ತು ಇಂಟರ್ನೆಟ್ ವ್ಯವಸ್ಥೆಗಳನ್ನು ಪರೀಶೀಲಿಸಿದರು. ಯಾವುದೇ ತಾಂತ್ರಿಕ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಯಾವುದೇ ಸಿಸಿಟವಿ ಸ್ಥಗಿತಗೊಳ್ಳದಂತೆ ನಿಗಾ ವಹಿಸಬೇಕು ಎಂದರು. ಈ ಸಂದರ್ಭ ವೈದ್ಯಕೀಯ ವ್ಯವಸ್ಥೆಯ ಕುರಿತು ಪರೀಶೀಲಿಸಿದರು.
ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೇ ಭಯ ಮುಕ್ತರಾಗಿ ಧೈರ್ಯದಿಂದ ಪರೀಕ್ಷೆಯನ್ನು ಬರೆಯುವಂತೆ ಕ್ರಮ ವಹಿಸಬೇಕು ಎಂದು ಪರೀಕ್ಷಾ ಮೇಲ್ವಿಚಾರಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಾಜರಾತಿ, ಪರೀಕ್ಷಾ ಕೇಂದ್ರಗಳ ಕೊಠಡಿಗಳ ಮಾಹಿತಿ, ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ಆಸನ ವ್ಯವಸ್ಥೆ, ಪರೀಕ್ಷಾ ಕೇಂದ್ರದಲ್ಲಿ ಮೂಲಭೂತ ಸೌಲಭ್ಯ, ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿರುವ ಸಿ.ಸಿ.ಟಿ.ವಿ ಮತ್ತು ವೆಬ್‌ಕಾಸ್ಟಿಂಗ್ ಪ್ರಕ್ರಿಯೆಯನ್ನು ಪರೀಶೀಲಿಸಿದರು. ಪರೀಕ್ಷಾ ಕೇಂದ್ರಗಳಿಗೆ ಪೋಲಿಸ್ ಭದ್ರತಾ ವ್ಯವಸ್ಥೆ ಕುರಿತು ಪರೀಶೀಲಿಸಿದರು. ಈ ಸಂದರ್ಭದಲ್ಲಿ ಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು._
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 