ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಬಣ್ಣನೆರಾಷ್ಟ್ರೀಯ ಭಾವೈಕ್ಯತೆಗೆ ಶಂಕರಾಚಾರ್ಯರ ಕೊಡುಗೆ ಅನನ್ಯ
Deputy Commissioner Kavita S. Mannikeri at Shankaracharya Jayanti program, says Shankaracharya's con
ವಿಜಯನಗರ (ಹೊಸಪೇಟೆ) 22: ಜಗತ್ತಿಗೆ ಅದ್ವೈತ ಸಿದ್ಧಾಂತದಂತ ಪರಿಚಯಿಸಿದ ಜಗದ್ಗುರು ಆದಿ ಶಂಕರಾಚಾರ್ಯರು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಮಹಾನ್ ಚೇತನ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಬಣ್ಣಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಆದಿ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಶಂಕರಾಚಾರ್ಯರು ಕೇವಲ 32 ವರ್ಷಗಳ ಅತ್ಯಲ್ಪ ಜೀವಿತಾವಧಿಯಲ್ಲಿ ಇಡೀ ಭಾರತವನ್ನು ಪಾದಯಾತ್ರೆಯ ಮೂಲಕ ಸಂಚರಿಸಿ, ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪವಿತ್ರ ಮಠಗಳ ಸ್ಥಾಪಿಸಿದರು. ಈ ಮೂಲಕ ಅವರು ರಾಷ್ಟ್ರೀಯ ಭಾವೈಕ್ಯತೆ ಮತ್ತು ಅಖಂಡತೆಗೆ ಭದ್ರ ಬುನಾದಿ ಹಾಕಿದರು. ಶಂಕರಾಚಾರ್ಯರು ಪ್ರತಿಪಾದಿಸಿದ ಅಹಂ ಬ್ರಹ್ಮಾಸ್ಮಿ ತತ್ವವು ಮನುಷ್ಯರಲ್ಲಿರುವ ದೈವತ್ವವನ್ನು ಜಾಗೃತಗೊಳಿಸುತ್ತದೆ. ಸಮಾಜದಲ್ಲಿನ ಮೇಲು-ಕೀಳು ಎಂಬ ಭಾವ ತೊರೆದು ಸೌಹಾರ್ದಯುತವಾಗಿ ಬಾಳಬೇಕು ಎಂದರು.
ಇಂದಿನ ಯುವ ಪೀಳಿಗೆಯು ಭೌತಿಕ ಸುಖಕ್ಕೆ ಮಾರುಹೋಗದೆ, ಶಂಕರಾಚಾರ್ಯರು ತೋರಿಸಿಕೊಟ್ಟ ಜ್ಞಾನ ಮತ್ತು ವಿವೇಕದ ಹಾದಿಯಲ್ಲಿ ಸಾಗಬೇಕು. ಸಂಸ್ಕಾರಯುತ ಮತ್ತು ಸದೃಢ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಇಂತಹ ಮಹಾನ್ ಪುರುಷರ ಜಯಂತಿಗಳು ಕೇವಲ ಆಚರಣೆಗಷ್ಟೇ ಸೀಮಿತವಾಗದೆ, ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಆಶಯ ವ್ಯಕ್ತಪಡಿಸಿದರು.ಈ ವೇಳೆ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗಣ್ಣ ರಂಗಣ್ಣನವರ, ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ಮಗನಿಗಾಗಿ 2ನೇ ದಿನವು ಮುಂದುವರಿದ ಶೋಧ ಕಾರ್ಯ: ಕುಟುಂಬಕ್ಕಿದ್ದ ಒಬ್ಬನೆ ಮಗು ನೀರುಪಾಲು
ಅಕ್ರಮ ಚಟುವಟಿಕೆಗಲ್ಲಿ ಭಾಗಿ : ಇಬ್ಬರು ಆರೋಪಿತರು ಬೆಳಗಾವಿ ಜಿಲ್ಲೆಯಿಂದ ಗಡಿಪಾರು 