ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ಪರೀಶೀಲನೆ

Deputy Commissioner T. Bhoobalan visits and inspects SSLC examination centers

ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ಪರೀಶೀಲನೆ  

ವಿಜಯಪುರ ಮಾ.21 : ಜಿಲ್ಲೆಯ 131 ಪರೀಕ್ಷಾ ಕೇಂದ್ರಗಳಲ್ಲಿ (ಮಾ.21)        ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭಗೊಂಡಿದ್ದು, ಶುಕ್ರವಾರ ಪ್ರಥಮ ಭಾಷೆ ಪರೀಕ್ಷೆ ಜರುಗಿತು. ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು  ನಗರದ ವಿ.ಬಿ ದರಬಾರ ಶಾಲೆಗೆ ಭೇಟಿ ನೀಡಿ, ಪರೀಶೀಲನೆ ನಡೆಸಿದ ಅವರು, ವಿದ್ಯಾರ್ಥಿಗಳು ಗೊಂದಲ ಮಾಡಿಕೊಳ್ಳದೇ, ಗಲಿಬಿಲಿಗೊಳಗಾಗದೇ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಆತ್ಮಸ್ಥೈರ್ಯ ತುಂಬಿದರು.  

ಪರೀಕ್ಷೆಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ನಿರ್ವಹಿಸಬೇಕು. ಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಮಹತ್ವದ ಘಟ್ಟವಾಗಿರುವುದರಿಂದ ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳು ಬಾರದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ದೂರಿಗೆ ಆಸ್ಪದೆ ನೀಡದೇ ಪರೀಕ್ಷಾ ನಿಯಮಗಳನ್ನುನಸರಿಸಿ, ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿ, ಸಿಬ್ಬಂದಿ ತಮಗೆ ವಹಿಸಿದ ಪರೀಕ್ಷಾ ಕಾರ್ಯಗಳನ್ನು ಅತ್ಯಂತ ಜವಾಬ್ದಾರಿಯಿಂದ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸಬೇಕು.  

ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಾಜರಾತಿ, ಪರೀಕ್ಷಾ ಕೇಂದ್ರಗಳ ಕೊಠಡಿಗಳ ಮಾಹಿತಿ, ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ಆಸನ ವ್ಯವಸ್ಥೆ, ಪರೀಕ್ಷಾ ಕೇಂದ್ರದಲ್ಲಿ ಮೂಲಭೂತ ಸೌಲಭ್ಯ,    ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿರುವ ಸಿ.ಸಿ.ಟಿ.ವಿ ಮತ್ತು ವೆಬ್‌ಕಾಸ್ಟಿಂಗ್ ಪ್ರಕ್ರಿಯೆಯನ್ನು ಪರೀಶೀಲಿಸಿದರು. ಪರೀಕ್ಷಾ ಕೇಂದ್ರಗಳಿಗೆ ಪೋಲಿಸ್ ಭದ್ರತಾ ವ್ಯವಸ್ಥೆ ಕುರಿತು ಪರೀಶೀಲಿಸಿದರು.   

ಈ ಸಂದರ್ಭ ಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.