ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ
Deputy Commissioner directs to accelerate development works
ಲೋಕದರ್ಶನ ವರದಿ
ವಿಜಯಪುರ, ಆ.29: ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಎದುರಾಗುತ್ತಿರುವ ತಾಂತ್ರಿಕ ಅಡಚಣೆ ಹಾಗೂ ಸ್ಥಳೀಯ ಸಮಸ್ಯೆಗಳನ್ನು ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಶೀಘ್ರವಾಗಿ ಪರಿಹರಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚಿಸಿದರು.
ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ನಿರ್ದೇಶನಗಳು ಹಾಗೂ ಸ್ವಚ್ಛ ಭಾರತ್ ಮಿಷನ್ (ನಗರ) 2.0 ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ್ವಚ್ಛ ಭಾರತ್ ಮಿಷನ್ನ ಉದ್ದೇಶಗಳನ್ನು ಪರಿಣಾಮಕಾರಿಯಾಗಿ ಸಾಧಿಸಲು ಕಾಮಗಾರಿಗಳ ಗುಣಮಟ್ಟಕ್ಕೆ ಆದ್ಯತೆ ನೀಡಿ, ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಯೋಜನಾ ಅನುಷ್ಠಾನ ಘಟಕ ಹಾಗೂ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯೊಂದಿಗೆ ನಿರಂತರ ಸಮನ್ವಯ ಸಾಧಿಸಿ ಕಾಮಗಾರಿಗಳ ಪ್ರಗತಿಯನ್ನು ಮೇಲ್ವಿಚಾರಣೆ ಮಾಡುವಂತೆ ಸೂಚಿಸಿದರು.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಒಳಚರಂಡಿ ಸಂಸ್ಕರಣಾ ಘಟಕ (ಎಸ್ಟಿಪಿ), ಎಫ್ಎಸ್ಟಿಪಿ ಹಾಗೂ ಒಳಚರಂಡಿ ಸಂಗ್ರಹಣೆ ಮತ್ತು ಸಂಪರ್ಕ ಕಾಮಗಾರಿಗಳ ಪ್ರಗತಿಯನ್ನು ಸಭೆಯಲ್ಲಿ ಪರೀಶೀಲಿಸಲಾಯಿತು. ಎನ್ಜಿಟಿ ನಿರ್ದೇಶನಗಳ ಅನುಷ್ಠಾನದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಿಸಿದ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಕಾಮಗಾರಿಗಳ ಪ್ರಗತಿ, ಎದುರಾಗಿರುವ ಸಮಸ್ಯೆಗಳು ಹಾಗೂ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತು ನಿಯಮಿತವಾಗಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಅಮೃತ್-2.0 ಯೋಜನೆಯಡಿ ನಗರ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆ, ಒಳಚರಂಡಿ ವ್ಯವಸ್ಥೆ, ಮೂಲಸೌಕರ್ಯ ಹಾಗೂ ಉದ್ಯಾನವನ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಲಧಾರೆ ಯೋಜನೆಯಡಿ ಸರ್ಕಾರಿ ಜಾಗದ ಕೊರತೆ ಇರುವ ಸ್ಥಳಗಳನ್ನು ಗುರುತಿಸಿ, ಆಲಮಟ್ಟಿ ಹಾಗೂ ನಾರಾಯಣಪುರ ಹಿನ್ನೀರಿನಿಂದ ಆರಂಭವಾಗುವ ಕುಡಿಯುವ ನೀರಿನ ಯೋಜನೆಯನ್ನು ಸಮರ್ಕವಾಗಿ ಅನುಷ್ಠಾನಗೊಳಿಸಲು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಯೋಜನಾಬದ್ಧವಾಗಿ ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು. ಸಂಬಂಧಿಸಿದ ಎಲ್ಲ ಇಲಾಖೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವುದರ ಜೊತೆಗೆ ಯೋಜನೆಗಳ ಅನುದಾನ ಬಳಕೆ ಮತ್ತು ಕಾಮಗಾರಿಗಳ ಪ್ರಗತಿಯನ್ನು ನಿಯಮಿತವಾಗಿ ಪರೀಶೀಲಿಸಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 