ಡಿಜೆ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
Deputy Commissioner orders ban on DJ usage
ಕಾರವಾರ 10: ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು ನಿಯಮ) ನಿಯಮಗಳು, 2000 ರನ್ವಯ ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿ.ಎನ್.ಎಸ್.ಎಸ್), 2023 ಕಲಂ 163 ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಸಾರ್ವಜನಿಕ ಸುವ್ಯವಸ್ಥೆಯ ಹಿತದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಯಾವುದೇ ಡಿಜಿ ವ್ಯವಸ್ಥೆಗಳು, ಬೇಸ್ ಬೂಸ್ಟರ್‌ಗಳು, ಮೊಬೈಲ್ ಡಿಜೆ ವಾಹನಗಳು ಹಾಗೂ 75 ಡೆಸಿಬೆಲ್ ಮೀರಿದ ಶಬ್ದ ವೃದ್ಧಿ ಸಾಧನಗಳ ಬಳಕೆಯನ್ನು ಮುಂದಿನ ಆದೇಶದವರೆಗೆ ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಆದ್ದೇಶಿಸಿದ್ದಾರೆ.
ಇದಲ್ಲದೆ ವಸತಿ ಪ್ರದೇಶಗಳು, ಸೈಲೆಂಟ್ ಝೇನ್‌ಗಳು (ಆಸ್ಪತ್ರೆ, ಶಾಲೆ, ನ್ಯಾಯಾಲಯ ಹಾಗೂ ಧಾರ್ಮಿಕ ಸ್ಥಳಗಳಿಂದ 100 ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶಗಳು), ಇಳಿವು ರಸ್ತೆ/ಸಂಚಾರ ದಟ್ಟಣೆ ಪ್ರದೇಶಗಳು, ಸಮುದಾಯ ಸೂಕ್ಷ್ಮ ಪ್ರದೇಶಗಳು ಹಾಗೂ ಜಿಲ್ಲೆಯಾದ್ಯಂತ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಡಿಜೆ ಅಥವಾ ಹೆಚ್ಚಿನ ಶಬ್ದ ಸಾಧನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಮುಂದುವೆರದು ಯಾವುದೇ ಸಾರ್ವಜನಿಕ ಕಾರ್ಯಕ್ರಮ, ಮೆರವಣಿಗೆ ಅಥವಾ ಆಚರಣೆಯನ್ನು ಆಯೋಜಿಸುವವರು ಅತೀ ಅವಶ್ಯವಿದ್ದಲ್ಲಿ ಪೂರ್ವ ಲಿಖಿತ ಷರತ್ತುಬದ್ಧ ಮಿತ ಶಬ್ದ ವ್ಯವಸ್ಥೆಗಳಿಗೆ ಮಾತ್ರ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು , ಶಬ್ದ ನಿಯಮಗಳ ಪಾಲನೆಗೆ ಸಂಬಂಧಿಸಿದಂತೆ ಲಿಖಿತ ಮುಚ್ಚಳಿಕೆ ಪತ್ರ ನೀಡಬೇಕು ಹಾಗೂ ಈ ಆದೇಶದ ಉಲ್ಲಂಘನೆ ಸಂಭವಿಸಿದ್ದಲ್ಲಿ ಆಯೋಜಕರು ವೈಯಕ್ತಿಕವಾಗಿ ಹೊಣೆಗಾರರಾಗಿರುತ್ತಾರೆ ಎಂದು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 