ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ
Deputy Commissioner visits SSLC examination centers
ಲೋಕದರ್ಶನ ವರದಿ
ಕಾರವಾರ, ಮಾ.18 :-ಎಸ್ಎಸ್ಎಲ್ಸಿ ಪರೀಕ್ಷೆಗಳು ಜಿಲ್ಲೆಯಲ್ಲಿ ಪಾರದರ್ಶಕವಾಗಿ ಮತ್ತು ಸುಗಮವಾಗಿ ನಡೆಯುತ್ತಿರುವ ಕುರಿತಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಬುಧವಾರ ಭೇಟಿ ನೀಡಿ ಪರೀಶೀಲಿಸಿದರು.
ಕಾರವಾರದ ಸೈಂಟ್ ಮೈಕಲ್ ಮತ್ತು ಹಿಂದೂ ಹೈಸ್ಕೂಲ್ ಗೆ ಭೇಟಿ ನೀಡಿ ಪರೀಶೀಲಿಸಿದ ಜಿಲ್ಲಾಧಿಕಾರಿಗಳು, ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಿರುವ ಕುರಿತು ಪರೀಶೀಲಿಸಿದರು. ಪರೀಕ್ಷಾ ಮಂಡಳಿಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಶಿಕ್ಷಕರಿಗೆ ತಿಳಿಸಿದ ಅವರು ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಪ್ರೋತ್ಸಾಹಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕೊಠಡಿಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿನ ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆಯ ಕುರಿತು ಪರೀಶೀಲಿಸಿದರು. ಡಿಡಿಪಿಐ ಲತಾ ನಾಯಕ್ ಮತ್ತಿತರರು ಇದ್ದರು.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 