ಕಾರ್ಯಾಗಾರದಲ್ಲಿ ಉಪನಿರ್ದೇಶಕ ರಾಮಕೃಷ್ಣ ನಾಯಕ.ಎಂ ಅಭಿಪ್ರಾಯ
Deputy Director Ramakrishna Nayak.M's opinion at the workshop
ಬಳ್ಳಾರಿ 18: ಮಕ್ಕಳು ಮತ್ತು ಮಹಿಳೆಯರು ಅನೈತಿಕ ಸಾಗಾಣಿಕೆಗೆ ಒಳಗಾಗದಂತೆ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಅವರನ್ನು ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ.ಎಂ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಪಂ ಹಳೆಯ ನಜೀರ್ ಸಾಬ್ ಸಭಾಂಗಣದಲ್ಲಿ “ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಹಾಗೂ ಐಟಿಪಿಎ, 1956ರ ಕಾಯ್ದೆ” ಕುರಿತು ಜಿಲ್ಲಾ ಮಟ್ಟದ ವಿವಿಧ ಸಹಭಾಗಿದಾರರ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳಿಗೆ ಗುರುವಾರ ಏರಿ್ಡಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದ ಪ್ರತಿಯೊಬ್ಬರಿಗೂ ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಿಲ್ಲೆಯ ಎಲ್ಲಾ ನಗರ-ಸ್ಥಳೀಯ ಸಂಸ್ಥೆಗಳಲ್ಲಿ ಅರಿವು ಮೂಡಿಸುವ ಅಗತ್ಯವಿದೆ. ವಿವಿಧ ಇಲಾಖೆಗಳ ಸಹಭಾಗಿತ್ವದೊಂದಿಗೆ ಮಕ್ಕಳು ಮತ್ತು ಮಹಿಳೆಯರು ಅನೈತಿಕ ಸಾಗಾಣಿಕೆಯನ್ನು ತಡೆಗಟ್ಟಬಹುದಾಗಿದೆ ಎಂದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಉಮಾದೇವಿ ಅವರು ಮಾತನಾಡಿ, ಪ್ರಸ್ತುತ ಶಾಲೆಗಳಲ್ಲಿ ಮಾನವ ಕಳ್ಳ ಸಾಗಾಣಿಕೆ ಕುರಿತು ಮಕ್ಕಳಲ್ಲಿ ಅರಿವು ಮೂಡಿಸುವ ಅವಶ್ಯಕವಾಗಿದೆ. ಮಕ್ಕಳಿಗೆ ಶಾಲೆಯೇ ಸುರಕ್ಷಿತ ಸ್ಥಳವಾಗಿದ್ದು, 7 ದಿನಕ್ಕಿಂತ ಹೆಚ್ಚು ಗೈರಾದಲ್ಲಿ ಅಂತಹ ಮಕ್ಕಳ ಪೋಷಕರನ್ನು ಸಂಪರ್ಕಿಸಿ ಮರಳಿ ಶಾಲೆಗೆ ಕರೆತರಬೇಕು. ಅದರಲ್ಲೂ ಪ್ರೌಢಶಾಲೆಯ ಹೆಣ್ಣುಮಕ್ಕಳ ಮೇಲೆ ನಿರಂತರ ನಿಗಾವಹಿಸಬೇಕು. ಗೈರಾದಲ್ಲಿ ಮಾಹಿತಿ ಸಂಗ್ರಹಿಸಬೇಕು. ಸಹಭಾಗೀದಾರರ ಇಲಾಖೆಗಳ ಅಧಿಕಾರಿಗಳು ಸಹ ಇದಕ್ಕೆ ಕೈಜೋಡಿಸಬೇಕಿದೆ ಎಂದು ಹೇಳಿದರು.
ಮಕ್ಕಳನ್ನು ಜೀತ ಕಾರ್ಮಿಕ ಪದ್ಧತಿಗೆ ಒಳಪಡಿಸುವಂತಿಲ್ಲ. 6 ರಿಂದ 18 ವರ್ಷದೊಳಗಿನ ಎಲ್ಲಾ ಮಕ್ಕಳ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ. ಜಿಲ್ಲೆಯಲ್ಲಿ ಮಕ್ಕಳ ರಕ್ಷಣೆಗೆ ಜಿಲ್ಲಾಡಳಿತ ಮುತುವರ್ಜಿ ವಹಿಸಿದೆ ಎಂದು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರ ದೇವಿ ಅವರು ಮಾತನಾಡಿ, ವಿಶ್ವಸಂಸ್ಥೆಯು 1989 ರಲ್ಲಿ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಅಂತರಾಷ್ಟ್ರೀಯ ಕಾನೂನು ಒಪ್ಪಂದ ಅಂಗೀಕರಿಸಿತು. 1992 ರಲ್ಲಿ ಭಾರತ ಇದಕ್ಕೆ ಸಹಿ ಹಾಕಿತು. ಅಂದಿನಿಂದ ದೇಶದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಬಾಲನ್ಯಾಯ ಕಾಯ್ದೆ, ಪೋಕ್ಸೋ ಕಾಯ್ದೆ ಸೇರಿದಂತೆ ಹಲವಾರು ರೀತಿಯ ಕಾಯ್ದೆ-ಕಾನೂನುಗಳನ್ನು ರೂಪಿಸಲಾಯಿತು ಎಂದು ಹೇಳಿದರು.
ಮಕ್ಕಳು, ಮಹಿಳೆಯರು ಮತ್ತು ಹಿರಿಯ ನಾಗರಿಕರು ಈ ಜಾಲಕ್ಕೆ ಬೇಗನೇ ಜಾರುತ್ತಾರೆ. ಜೀತ ಕಾರ್ಮಿಕ ಪದ್ಧತಿ, ಅಂಗಾಂಗ ಕಸಿ, ಹೊರ ದೇಶಗಳಿಗೆ ಮಾರಾಟ, ಭಿಕ್ಷಾಟನೆ ಸೇರಿದಂತೆ ಹಲವಾರು ಅನಧೀಕೃತ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತದೆ. ಇದಕ್ಕೆ ಕಡಿವಾಣ ಹಾಕಲು ಗ್ರಾಪಂ, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಅಧಿಕಾರಿಗಳನ್ನೊಳಗೊಂಡ ಸಮಿತಿಗಳಿದ್ದು, ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಮನ್ವಯತೆ ಅತ್ಯಾವಶ್ಯಕವಾಗಿದೆ ಎಂದರು.
ಮಾನವ ಕಳ್ಳ ಸಾಗಾಣಿಕೆ ಮತ್ತು ಕೋರ್ ಕಮಿಟಿಯ ರಾಜ್ಯ ಉನ್ನತಾಧಿಕಾರಿಗಳ ಸಮಿತಿಯ ಸದಸ್ಯ ವಿಲಿಯಂ ಕ್ರಿಸ್ಟೋಫರ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಾನವ ಸಾಗಾಣಿಕೆಯು ಬಲವಾಗಿ ಹಾಗೂ ಮಿತಿ ಮೀರಿದ ರೀತಿಯಲ್ಲಿ ನಡೆಯುತ್ತಿರುವುದು ಕಂಡುಬರುತ್ತಿದ್ದು, ಈ ಪಿಡುಗು ಮಕ್ಕಳು, ಅಪ್ರಾಪ್ತ ವಯಸ್ಕರು, ಕಾರ್ಮಿಕ ವರ್ಗ, ಮಹಿಳೆಯರು, ಯುವ ಜನರನ್ನು ಸಹ ಸಮಸ್ಯೆಗೆ ತಳ್ಳುತ್ತಿದೆ. ಮಹಿಳೆಯರು ಮತ್ತು ಮಕ್ಕಳು ದುರ್ಬಲ ವರ್ಗದವರಾಗಿದ್ದು, ಅವರು ಮೋಸದ ಬಲೆಗೆ ಸುಲಭವಾಗಿ ಬೀಳುವ ಸಾಧ್ಯತೆಯಿರುವುದರಿಂದ ಅವರನ್ನು ರಕ್ಷಿಸುವುದು ಅವಶ್ಯಕವಾಗಿದೆ ಎಂದು ಹೇಳಿದರು.
ಬಳಿಕ “ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಹಾಗೂ ಐಟಿಪಿಎ, 1956ರ ಕಾಯ್ದೆ” ಕುರಿತು ಅರಿವು ಮೂಡಿಸಿದರು. ಕಾರ್ಯಾಗಾರದಲ್ಲಿ ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಎ.ಮೌನೇಶ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರೀವೀಕ್ಷಣಾಧಿಕಾರಿ ಈಶ್ವರ್ ರಾವ್ ಸೇರಿದಂತೆ ವಿವಿಧ ತಾಲ್ಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಸಹಭಾಗಿದಾರರ ಇಲಾಖೆಯ ಅಧಿಕಾರಿ-ಸಿಬ್ಬಂದಿ, ಎನ್.ಜಿ.ಒ ಸಂಸ್ಥೆಗಳ ಪದಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದಿ ಇಲಾಖೆಯ ಅಧಿಕಾರಿ, ಸಿಬ್ಬಂದಿ ವರ್ಗ ಹಾಗೂ ಇತರರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 