ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ದೇಸಾಯಿ ಸೂಚನೆ

ಹಾವೇರಿ:ಎ. 03: ಕರೋನಾ ವೈರಸ್ ಹರಡದಂತೆ ಹೆಚ್ಚಿನ ಕಾಳಜಿ ವಹಿಸಿ ಅಧಿಕಾರಿಗಳು ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಸಾರ್ವಜನಿಕರು ಅಧಿಕಾರಿಗಳೊಂದಿಗೆ ಸಹಕರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜನರಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಬಸನಗೌಡ ಹ ದೇಸಾಯಿ  ಅವರು ಸೂಚಿಸಿದ್ದಾರೆ.

ಶುಕ್ರವಾರ ಹಾನಗಲ್ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಕೋವಿಡ್-19 ಕರೊನಾ ವೈರಸ್ ಸಾಂಕ್ರಾಮಿಕ ರೋಗವು ವ್ಯಾಪಕವಾಗಿ ಹರಡದಂತೆ ಕೈಗೊಳ್ಳುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಚಚರ್ಿಸಿದರು.

ಸಾಮಾನ್ಯ ಜನರಿಗೆ ದೈನಂದಿನ ಬದುಕಿಗೆ ಅವಶ್ಯವಿರುವ ಸಾಮಾಗ್ರಿಗಳ ಕೊರತೆಯಾಗದಂತೆ ಕ್ರಮವಹಿಸಬೇಕು. ಅನಗತ್ಯವಾಗಿ ಜನರು ಬೀದಿಯಲ್ಲಿ ಓಡಾಡುವುದನ್ನು ನಿಯಂತ್ರಿಸಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಟಾಕನಗೌಡ ಪಾಟೀಲ,  ತಾ.ಪಂ.ಅಧ್ಯಕ್ಷ ಸಿದ್ದಪ್ಪ ಹಿರಗಪ್ಪನವರ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಚನ್ನಪ್ಪ ರಾಯಣ್ಣನವರ,  ಅಕ್ಷರ ದಾಸೋಹ ಸಹಾಯಕ ನಿದರ್ೆಶಕ ಶೇಖರ ಹಂಚಿನಮನಿ  ಇತರರು ಉಪಸ್ಥಿತರಿದ್ದರು