ದೇಸಿ ತರಬೇತಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ
Desi Training Certificate Distribution Programme
ಹುಲಕೋಟಿ 25: ಐ.ಸಿ.ಎ.ಆರ್-ಕೆ.ಎಚ್.ಪಾಟೀಲ ಕೃಷಿ ವಿಜ್ಞಾನ ಕೇಂದ್ರ, ಹುಲಕೋಟಿ, ಕೃಷಿ ವಿಶ್ವವಿದ್ಯಾಲಯ, ಧಾರವಾಡ, ಕೃಷಿ ಇಲಾಖೆ, ಗದಗ ಹಾಗೂ ಮ್ಯಾನೇಜ್, ಹೈದರಾಬಾದ ಇವರ ಸಂಯುಕ್ತಾಶ್ರಯದಲ್ಲಿ ನಡೆದ 2023-24 ನೇ ಸಾಲಿನ ಕೃಷಿ ಪರಿಕರ ಮಾರಾಟಗಾರರಿಗೆ ಒಂದು ವರ್ಷದ ದೇಸಿ ತರಬೇತಿಯ ಪ್ರಮಾಣ ಪ್ರಮಾಣ ಪತ್ರ ವಿತರಣಾ ಸಮಾರಂಭ ಹುಲಕೋಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ನೆರವೇರಿತು.
ಈ ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾಲಯ, ಧಾರವಾಡದ ವಿಸ್ತರಣಾ ನಿರ್ದೇಶಕರಾದ ಡಾ.ಎಮ್.ವ್ಹಿ.ಮಂಜುನಾಥ ಇವರು ಉದ್ಘಾಟನೆ ನೆರವೇರಿಸಿ, ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಕೃಷಿ ಪರಿಕರ ಮಾರಾಟಗಾರರು ರೈತರ ನೇರ ಸಂಪರ್ಕದಲ್ಲಿರುವದರಿಂದ, ಅವರಿಗೆ ಅವಶ್ಯವಿರುವ ಸಲಹೆಗಳನ್ನು ಸೂಕ್ತ ರೀತಿಯಲ್ಲಿ ನೀಡಲು ದೇಸಿ ತರಬೇತಿ ಬಹಳ ಸಹಕಾರಿಯಾಗಿದೆ ಎಂದರು. ರೈತರಿಗೆ ಬೇಕಾಗಿರುವ ಪರಿಕರಗಳನ್ನಷ್ಟೇ ಅಲ್ಲದೇ ಕಾಲಕಾಲಕ್ಕೆ ಬೆಳೆಗಳ ಕುರಿತು ತಾಂತ್ರಿಕ ಸಲಹೆಗಳನ್ನೂ ನೀಡಬೇಕು ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಎಸ್. ಎನ್. ಜಾಧವ್, ರೈತರ ಸೇವೆ ದೇವರ ಸೇವೆಗೆ ಸಮಾನವಾಗಿರುವುದರಿಂದ ಶ್ರದ್ಧೆ ಮತ್ತು ನಿಷ್ಠೆಯಿಂದ ಕಾರ್ಯ ನಿರ್ವಹಿಸಬೇಕೆಂದು ಕಿವಿಮಾತು ಹೇಳಿದರು ಹಾಗೂ ಪ್ರಮಾಣಪತ್ರ ಪಡೆದ ಅಭ್ಯರ್ಥಿಗಳಿಗೆ ಸೇವಾ ಪ್ರಮಾಣವಚನ ಬೋಧಿಸಿದರು. ಉಪ ಕೃಷಿ ನಿರ್ದೇಶಕರಾದ ಶ್ರೀಮತಿ ಸ್ಪೂರ್ತಿ ಜಿ.ಎಸ್. ಇವರು ಮಾತನಾಡಿ ಕೃಷಿ ಪರಿಕರ ಮಾರಾಟಗಾರರು ರೈತರು ಮತ್ತು ಕೃಷಿ ಇಲಾಖೆ, ಕೃಷಿ ವಿಶ್ವವಿದ್ಯಾಲಯ ಹಾಗೂ ಕೃಷಿ ವಿಜ್ಞಾನ ಕೇಂದ್ರಗಳ ನಡುವೆ ಕೊಂಡಿಯಾಗಿ ವಿಸ್ತರಣಾ ಸೇವೆಯಲ್ಲಿ ನಿರತರಾಗಬೇಕು ಎಂದರು. ಅಲ್ಲದೇ ಕೃಷಿ ಪರಿಕರಗಳಾದ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳ ವ್ಯವಹಾರವನ್ನು ರಚಿತ/ನಿರ್ದಿಷ್ಟ ಕಾನೂನಿನ ಚೌಕಟ್ಟಿನಲ್ಲಿ ನಿರ್ವಹಿಸಬೇಕು ಎಂದು ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ.ಸುಧಾ ವ್ಹಿ. ಮಂಕಣಿ, ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ದೇಸಿ ತರಬೇತಿಯ ಪ್ರಮಾಣಪತ್ರ ಪಡೆದ ಅಭ್ಯರ್ಥಿಗಳಿಗೆ ಅಭಿನಂದಿಸಿ, ಈ ತರಬೇತಿಯಿಂದ ಪಡೆದ ಜ್ಞಾನವನ್ನು ರೈತರಿಗೆ ಸೂಕ್ತ ರೀತಿಯಲ್ಲಿ ತಲುಪಿಸುವಲ್ಲಿ ಕೃಷಿ ಪರಿಕರ ಮಾರಾಟಗಾರರ ಪಾತ್ರ ಬಹಳ ಮುಖ್ಯ ಎಂದು ಅಭಿಪ್ರಾಯ ಪಟ್ಟರು.
ಕಾರ್ಯಕ್ರಮದಲ್ಲಿ ಗದಗ ಜಿಲ್ಲೆಯ ಒಟ್ಟು 38 ದೇಸಿ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ನೀಡಲಾಯಿತು. ದೇಸಿ ತರಬೇತಿಯ ಫೆಸಿಲಿಟೇಟರ್ ಆದ ಶ್ರೀ ಎಸ್.ಕೆ.ಮುದ್ಲಾಪೂರ ಇವರು ದೇಸಿ ಕೋರ್ಸ ಕುರಿತು ಸಂಕ್ಷಿಪ್ತ ಪ್ರಸ್ತಾವಿಕ ನುಡಿಗಳನ್ನು ಹೇಳಿದರು. ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಹೇಮಾವತಿ ಹಿರೇಗೌಡರ್ ಸ್ವಾಗತಿಸಿದರು ಎನ್.ಎಚ್.ಭಂಡಿ ವಂದಿಸಿದರು ಹಾಗೂ ಡಾ. ವಿನಾಯಕ ನಿರಂಜನ್ ಕಾರ್ಯಕ್ರಮವನ್ನು ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 