ಜಮ್ಮು ಮತ್ತು ಕಾಶ್ಮೀರದ ಪ್ರಗತಿ ಹಳಿತಪ್ಪಿಸಲು ಶತ್ರುಗಳು ಮಾಡಿದ ಹತಾಶ ಪ್ರಯತ್ನ: ಪ್ರಧಾನಿ ಮೋದಿ

Desperate attempt by enemies to derail progress of Jammu and Kashmir: PM Modi

ಹೊಸದಿಲ್ಲಿ 27ಜಮ್ಮು ಮತ್ತು ಕಾಶ್ಮೀರದ ಪ್ರಗತಿ ಶತ್ರುಗಳ ಕಣ್ಣು ಕೆಂಪಗಾಗುವಂತೆ ಮಾಡಿದ್ದು, ಇದು ಕಾಶ್ಮೀರ ಮತ್ತು ದೇಶದ ಶತ್ರುಗಳು ಈ ಪ್ರದೇಶದ ಗಮನಾರ್ಹ ಪ್ರಗತಿಯನ್ನು ಹಳಿತಪ್ಪಿಸಲು ಮಾಡಿದ ಹತಾಶ ಪ್ರಯತ್ನ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದರು.

ರವಿವಾರ  ಮನ್‌ ಕೀ ಬಾತ್‌ ಕಾರ್ಯಕ್ರಮದ 121ನೇ ಎಪಿಸೋಡ್‌ ನಲ್ಲಿ ಮಾತನಾಡಿ, ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಅವರು ಕಾಶ್ಮೀರವು ಇತ್ತೀಚಿನ ವರ್ಷಗಳಲ್ಲಿ ಅಭೂತಪೂರ್ವ ಪ್ರಗತಿಯನ್ನು ಕಂಡಿದೆ. ಹೆಚ್ಚುತ್ತಿರುವ ಪ್ರವಾಸೋದ್ಯಮ, ಶಾಲೆಗಳು ಮತ್ತು ಕಾಲೇಜುಗಳು ಮತ್ತು ಯುವಕರಿಗೆ ಅವಕಾಶಗಳ ಏರಿಕೆಯೊಂದಿಗೆ ಪ್ರಗತಿ ಕಾಣುತ್ತಿದೆ ಎಂದರು.

ಇದೇ ವೇಳೆ ಪಹಲ್ಗಾಮ್ ಉಗ್ರ ದಾಳಿಯಲ್ಲಿ ಮೃತಪಟ್ಟವರಿಗೆ ನ್ಯಾಯ ಸಿಗುತ್ತೆ, ಉಗ್ರರಿಗೆ ಕಠಿಣ ಶಿಕ್ಷೆ ಕೊಟ್ಟೇ ಕೊಡುತ್ತೇವೆಂದು ಭರವಸೆ ನೀಡಿದಿದ್ದಾರೆ.

ಕಾಶ್ಮೀರದ ಪ್ರಗತಿಯಿಂದ ಕೆಲವು ಶತ್ರುಗಳು ಸಂತೋಷವಾಗಿಲ್ಲ. ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ಘಟನೆಯು ದೇಶದ ಪ್ರತಿಯೊಬ್ಬ ನಾಗರಿಕನನ್ನು ದುಃಖಿತನನ್ನಾಗಿ ಮಾಡಿದೆ. ಈ ಭಯೋತ್ಪಾದಕ ದಾಳಿಯ ಚಿತ್ರಗಳನ್ನು ನೋಡಿದ ನಂತರ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ ಎಂದು ನನಗೆ ತಿಳಿದಿದೆ. ಪಹಲ್ಗಾಮ್‌ನಲ್ಲಿ ನಡೆದ ಈ ದಾಳಿಯು ಭಯೋತ್ಪಾದನಾ ಚಟುವಟಿಕೆಯ ಹತಾಶೆಯನ್ನು ತೋರಿಸುತ್ತದೆ, ಅವರ ಹೇಡಿತನವನ್ನು ತೋರಿಸುತ್ತದೆ.

ದೇಶದ ಏಕತೆ, 140 ಕೋಟಿ ಭಾರತೀಯರ ಒಗ್ಗಟ್ಟು, ಭಯೋತ್ಪಾದನೆಯ ವಿರುದ್ಧದ ಈ ಯುದ್ಧದಲ್ಲಿ ನಮ್ಮ ದೊಡ್ಡ ಶಕ್ತಿಯಾಗಿದೆ. ಈಗ ತಾನೇ ಎಲ್ಲಾ ವಿಚಾರಗಳಲ್ಲೂ ಸಮೃದ್ಧವಾಗಿರುವ ಕಾಶ್ಮೀರವನ್ನು ಹಳೆಯ ಪರಿಸ್ಥಿತಿಗೆ ತಂದು ನಿಲ್ಲಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ.

ಕಾಶ್ಮೀರದಲ್ಲಿ ಶಾಂತಿ ಮರಳುತ್ತಿದ್ದ ಸಮಯದಲ್ಲಿ, ಶಾಲಾ ಕಾಲೇಜುಗಳಲ್ಲಿ ಹುರುಪು ತುಂಬಿತ್ತು, ನಿರ್ಮಾಣ ಕಾರ್ಯಗಳು ಅಭೂತಪೂರ್ವ ವೇಗವನ್ನು ಪಡೆದುಕೊಂಡಿದ್ದವು, ಪ್ರಜಾಪ್ರಭುತ್ವ ಬಲಗೊಳ್ಳುತ್ತಿತ್ತುಯ ಪ್ರವಾಸಿಗರ ಸಂಖ್ಯೆಯಲ್ಲಿ ದಾಖಲೆಯ ಏರಿಕೆ ಕಂಡುಬಂದಿದೆ, ಜನರ ಆದಾಯ ಹೆಚ್ಚುತ್ತಿದೆ, ಯುವಕರಿಗೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿವೆ. ಆದರೆ, ಈ ಬೆಳವಣಿಗೆ ಶತ್ರುಗಳ ಕಣ್ಣು ಕೆಂಪಗಾಗಿಸಿದೆ. ಹೀಗಾಗಿ ದಾಳಿ ಮೂಲಕ ಹತಾಶ ಪ್ರಯತ್ನ ಮಾಡಿದ್ದಾರೆ.

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ಘಟನೆಯು ದೇಶದ ಪ್ರತಿಯೊಬ್ಬ ನಾಗರಿಕನನ್ನು ದುಃಖಿತನನ್ನಾಗಿ ಮಾಡಿದೆ. ಪ್ರತಿಯೊಬ್ಬ ಭಾರತೀಯನೂ ಸಂತ್ರಸ್ತ ಕುಟುಂಬಗಳ ಬಗ್ಗೆ ಆಳವಾದ ಸಹಾನುಭೂತಿಯನ್ನು ಹೊಂದಿದ್ದಾರೆ. ಈ ಭಯೋತ್ಪಾದಕ ದಾಳಿಯ ನಂತರ, ಪ್ರಪಂಚದಾದ್ಯಂತ ನಿರಂತರವಾಗಿ ಸಂತಾಪ ಸೂಚಿಸಲಾಗುತ್ತಿದೆ. ಜಾಗತಿಕ ನಾಯಕರು ಕೂಡ ನನಗೆ ಕರೆ ಮಾಡಿದ್ದಾರೆ, ಪತ್ರ ಬರೆದಿದ್ದಾರೆ. ಈ ಘೋರ ಭಯೋತ್ಪಾದಕ ದಾಳಿಯನ್ನು ಎಲ್ಲರೂ ಬಲವಾಗಿ ಖಂಡಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಖಂಡಿತವಾಗಿಯೂ ನ್ಯಾಯ ಸಿಗುತ್ತದೆ ಎಂದು ನಾನು ಮತ್ತೊಮ್ಮೆ ಭರವಸೆ ನೀಡುತ್ತೇನೆ. ಹಾಗೆಯೇ ಈ ದಾಳಿಯ ಅಪರಾಧಿಗಳು ಮತ್ತು ಸಂಚುಕೋರರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಿದರು.