ದೇವದಾಸಿ ಪದ್ಧತಿ ಸಮಾಜದ ಗಂಭೀರ ಪಿಡುಗು: ಪ್ರೊ.ಆರ್.ಸುನಂದಮ್ಮ
Devadasi system is a serious scourge of society: Prof. R. Sunandamma
ವಿಜಯಪುರ 29: ದೇವದಾಸಿ ಪದ್ಧತಿ ಸಮಾಜದ ಗಂಭೀರ ಪಿಡುಗಾಗಿ ಅನೇಕ ಮಕ್ಕಳ ಬದುಕನ್ನು ಶೋಷಣೆ ಮತ್ತು ದೌರ್ಜನ್ಯಕ್ಕೆ ತಳ್ಳುತ್ತಿದೆ. ಶಿಕ್ಷಣ ಮತ್ತು ಹಕ್ಕುಗಳ ಅರಿವಿನ ಮೂಲಕ ಮಾತ್ರ ಈ ಮಕ್ಕಳನ್ನು ಸಬಲಗೊಳಿಸಿ ಸಮಾಜದಲ್ಲಿ ನಿಜವಾದ ಬದಲಾವಣೆ ತರಲು ಸಾಧ್ಯ ಎಂದು ಬೆಂಗಳೂರಿನ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಪ್ರೊ.ಆರ್.ಸುನಂದಮ್ಮ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಚಿಲ್ಡ್ರನ್ ಆಫ್ ಇಂಡಿಯಾ ಫೌಂಡೇಶನ್ ಇವರ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕಿಶೋರಿ ನಾಯಕಿಯರ ಒಕ್ಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಂತ ದುಡಿಮೆ ಹಾಗೂ ಶಿಕ್ಷಣದಿಂದಲೇ ಸಮಾಜದ ಬದಲಾವಣೆ ಸಾಧ್ಯ. ಸಮಾಜದಲ್ಲಿರುವ ಎಲ್ಲಾ ಅನಿಷ್ಟ ಪದ್ಧತಿಗಳನ್ನು ತೊಡೆದು ಹಾಕಿ ಸ್ವತಂತ್ರವಾಗಿ ಜೀವನ ನಡೆಸುವ ಅವಕಾಶ ಎಲ್ಲರಿಗೂ ಇದೆ. ಕುಟುಂಬ ವ್ಯವಸ್ಥೆ ಹೆಣ್ಣುಮಕ್ಕಳಿಗೆ ಆಧಾರವಾಗಬೇಕಾದರೂ, ಅನೇಕರು ದೌರ್ಜನ್ಯ ಮತ್ತು ಶೋಷಣೆಯನ್ನು ಅನುಭವಿಸುತ್ತಿದ್ದಾರೆ. ಮಕ್ಕಳಿಗೆ ಆತ್ಮವಿಶ್ವಾಸ ಬೆಳೆಸಿ, ತಮ್ಮ ಹಕ್ಕುಗಳು ಹಾಗೂ ಕಾಯ್ದೆಹಿಕಾನೂನುಗಳ ಬಗ್ಗೆ ಅರಿವು ಮೂಡಿಸುವುದು ಅಗತ್ಯ.
ಇದೇ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್ ಹಾಗರಗಿ ಮಾತನಾಡಿ, ಸಮಾಜದ ಶೋಷಿತ ವರ್ಗವನ್ನು ಮೇಲೆತ್ತಲು ಗುಡ್ ಸಂಸ್ಥೆ ಸಾಕಷ್ಟು ಶ್ರಮವಹಿಸುತ್ತಿದೆ. ದೇವದಾಸಿ ನಿರ್ಮೂಲನೆಗಾಗಿ ಜಾರಿಯಾದ ಸಮರಾ್ಣ ಕಾಯ್ದೆಯ ಮೂಲಕ ಈ ಪದ್ಧತಿಗೆ ಒಳಪಟ್ಟ ಅನೇಕ ಮಕ್ಕಳನ್ನು ಮೇಲೆತ್ತುವ ಉದ್ದೇಶದಿಂದ ವಿವಿಧ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದರು. ಬೆಂಗಳೂರಿನ ಮಕ್ಕಳ ತಜ್ಞ, ಮಕ್ಕಳ ಹಕ್ಕುಗಳ ಹೋರಾಟಗಾರ ವಾಸುದೇವ ಶರ್ಮಾ ಗುಡ್ ಯೋಜನೆಯ ಪ್ರಯಾಣ ಮತ್ತು ಒಕಾಲತ್ತು ಸೂಚಿ ಹಂಚಿಕೊಂಡರು. ಕ್ರೀಡೆಯಲ್ಲಿ ಭಾಗವಹಿಸಿದ ಕಿಶೋರಿ ಮತ್ತು ಕಿಶೋರ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಹಾಗೂ ಎಲ್ಲ ಸಂಘಟಕರಿಗೆ ಸನ್ಮಾನಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮಾತನಾಡಿ, ಮಕ್ಕಳ ಮೇಲೆ ನಡೆಯುವ ಶೋಷಣೆ ಮತ್ತು ದೌರ್ಜನ್ಯಗಳನ್ನು ತೊಡೆದು ಹಾಕಲು ಜಾಗತಿಕದಿಂದ ಸ್ಥಳೀಯ ಮಟ್ಟದವರೆಗೆ ಅನೇಕ ಸಂಸ್ಥೆಗಳು ಶ್ರಮಿಸುತ್ತಿವೆ. ರಾಜ್ಯಮಟ್ಟದ ಕಿಶೋರಿಹಿಕಿಶೋರರ ಒಕ್ಕೂಟವು ಶೋಷಿತ ಮಕ್ಕಳನ್ನು ಮೇಲೆತ್ತುವ ಮಹತ್ವದ ಪಾತ್ರ ವಹಿಸುತ್ತಿದೆ. ಡಿಜಿಟಲ್ ಕ್ರಾಂತಿಯೊಂದಿಗೆ ಸಾಮಾಜಿಕ ಮಾಧ್ಯಮಗಳ ದುರ್ಬಳಕೆ ಮಕ್ಕಳ ಕಲಿಕೆ ಮತ್ತು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವುದರಿಂದ, ಅದರ ಬಳಕೆ ಸರಿಯಾದ ಮಾರ್ಗದಲ್ಲಿ ಆಗಬೇಕು ಎಂದರು.
ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಬಸವರಾಜ ಲಕ್ಕಣ್ಣವರ, ವಿವಿಯ ಶಿಕ್ಷಣ ನಿಕಾಯದ ಡೀನ ಪ್ರೊ.ಸಕ್ಪಾಲ್ ಹೂವಣ್ಣ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಿ.ವಿ.ಸಾಲಿಮಠ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ, ಮುಖ್ಯಸ್ಥರು, ವಿದ್ಯಾರ್ಥಿನಿಯರು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿವಿಧ ಜಿಲ್ಲೆಗಳಿಂದ ಆಗಮಿಸಿರುವ 500ಕ್ಕೂ ಹೆಚ್ಚು ಕಿಶೋರಿ ನಾಯಕಿ ಹಾಗೂ ಕಿಶೋರ ನಾಯಕರು ಉಪಸ್ಥಿತರಿದ್ದರು.
ಪ್ರದರ್ಶನ ಕಲೆಗಳ ವಿಭಾಗದ ವಿಧ್ಯಾರ್ಥಿನಿಯರು ಮಹಿಳಾ ಗೀತೆ ಹಾಡಿದರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಸ್ವಾಗತಿಸಿದರು. ನೆದರ್‌ಲ್ಯಾಂಡ್ಸ್ ಇಂಡಿಯಾ ಮತ್ತು ನೇಪಾಳ, ಬಿ.ಡಿ.ಹೆಚ್ ರಾಷ್ಟ್ರೀಯ ನಿದೇರ್ಶಕ ಪಿ.ತಂಗಪೆರುಮಾಳ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ. ಭಾಗ್ಯಶ್ರೀ ದೊಡ್ಡಮನಿ ಹಾಗೂ ಡಾ.ಸುರೇಖಾ ರಾಠೋಡ ಅತಿಥಿಯರನ್ನು ಪರಿಚಯಿಸಿದರು. ಅತಿಥಿ ಉಪನ್ಯಾಸಕಿ ಸುಷ್ಮಾ ಪವಾರ ನಿರೂಪಿಸಿದರು. ಸಂಯೋಜಕಿ ಜನೀಪ್‌ರ ವೈ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 