ಡಿ. ದೇವರಾಜ ಅರಸು ಜನ್ಮ ದಿನಾಚರಣೆ ಪೂರ್ವ ಸಿದ್ಧತೆ ಸಭೆ
Devaraja Aras's Jayanti celebration pre-preparatory meeting
ಅಗತ್ಯ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಸೂಚನೆ
ಬೆಳಗಾವಿ 13 : ಡಿ. ದೇವರಾಜ ಅರಸು ಜನ್ಮ ದಿನಾಚರಣೆಯನ್ನು ಆಗಸ್ಟ್ 20 ರಂದು ಬೆಳಿಗ್ಗೆ 11 ಗಂಟೆಗೆ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಆ.13) ನಡೆದ ಡಿ. ದೇವರಾಜ ಅರಸು ಜನ್ಮದಿನಾಚರಣೆ ಕುರಿತು ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯರ್ಮಕ್ಕೂ ಮುಂಚೆ ಬೆಳಿಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಿಂದ ರಾಣಿ ಚನ್ನಮ್ಮ ವೃತ್ತದ, ಅಂಬೇಡ್ಕರ್ ರಸ್ತೆ, ಕೃಷ್ಣದೇವರಾಯ ಸರ್ಕಲ್ ಮಾರ್ಗವಾಗಿ ಕುಮಾರ ಗಂಧರ್ವ ಕಲಾ ಮಂದಿರದ ವರೆಗೆ ಮೆರವಣಿಗೆ ನಡೆಯಲಿದೆ.
ಅದೇ ರೀತಿಯಲ್ಲಿ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ವತಿಯಿಂದ ಡಿ. ದೇವರಾಜ ಅರಸು ಅವರ ಕುರಿತು ಮಾಹಿತಿಯಿರುವ ನುರಿತ ಪ್ರಾಧ್ಯಾಪಕರಿಂದ ಉಪನಾಸ್ಯ ಏರಿ್ಡಸಬೇಕು ಎಂದರು.
ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ:
ಜಿಲ್ಲಾ ಮಟ್ಟದ ಶಾಲಾ ಕಾಲೇಜು ವಿದ್ಯಾರ್ಥಿಗಳ ಪ್ರಬಂಧ ಸ್ಪರ್ಧೆ, ವಿದ್ಯಾರ್ಥಿ ನಿಲಯಗಳ ಮಕ್ಕಳಿಗೆ ಯೋಗ ಹಾಗೂ ವಿವಿಧ ಕ್ರೀಡೆಗಳ ಸ್ಪರ್ಧೆಗಳನ್ನು ಏರಿ್ಡಸಬೇಕು. ಜಿಲ್ಲಾ ಮತ್ತು ತಾಲೂಕಾ ಮಟ್ಟದ ವಿಜೇತರಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಣೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ತಿಳಿಸಿದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹರ್ಷ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಕನ್ನಡಪರ ಹೋರಾಟಗಾರ ಅಶೋಕ ಚಂದರಗಿ ಸೇರಿದಂತೆ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 