ಆಗಸ್ಟ 20 ರಂದು ಡಿ. ದೇವರಾಜ ಅರಸು ಜಯಂತಿ ಆಚರಣೆ: ಜೆ.ಬಿ.ಮಜ್ಜಗಿ
Devaraja Aras Jayanti Celebration on August 20: J.B. Majjagi
ಹುಬ್ಬಳ್ಳಿ 14: ಪ್ರತಿ ವರ್ಷದಂತೆ ಈ ವರ್ಷವು ಕೂಡ ಆಗಸ್ಟ 20 ರಂದು ಅದ್ಧೂರಿಯಾಗಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜಯಂತಿಯನ್ನು ಆಚರಣೆ ಮಾಡಲಾಗುವುದು ಎಂದು ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಜೆ.ಬಿ. ಮಜ್ಜಗಿ ಹೇಳಿದರು.
ಇಂದು ತಾಲೂಕು ಆಡಳಿತ ಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಡಿ.ದೇವರಾಜ ಅರಸು ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಅಂದು ಬೆಳಿಗ್ಗೆ 10 ಗಂಟೆಗೆ ತಾಲೂಕು ಆಡಳಿತ ಸಭಾಭವನದಲ್ಲಿ ಡಿ. ದೇವರಾಜ ಅರಸು ಅವರ ಜಯಂತಿ ಆಚರಣೆ ಮಾಡಲಾಗುತ್ತದೆ. ಪ್ರತಿಭಾವಂತ ವಿದ್ಯಾರ್ಥಿಗಳು, ಸಮಾಜದ ಸಾಧಕ ಮಹಿಳೆಯರಿಗೆ ಸನ್ಮಾನ ಮಾಡಲಾಗುವುದು. ಪ್ರಬಂಧ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.
ಪೂರ್ವಭಾವಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ನಾಗರತ್ನಾ ಕ್ಯಾಸನೂರ, ಮುಖಂಡರಾದ ಡಾ.ಡಿ.ಟಿ. ಪಾಟೀಲ್, ಸಂಜೀವ ಧುಮಕ್ಕನಾಳ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 